ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ.ಎ.9: ಇಲ್ಲಿನ ರಾಮಕ್ಷತ್ರಿಯ ಯುವಕ ಮಂಡಳಿ ಸಾರಥ್ಯದಲ್ಲಿ ಕುಂದಾಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಅಂಗವಾಗಿ ಸೀತಾರಾಮಚಂದ್ರ ಉತ್ಸವ ಮೂರ್ತಿಯನ್ನು ಕುಂದಾಪುರ ಶಾಸ್ತ್ರೀ ವೃತ್ತದಿಂದ ದೇವಸ್ಥಾನದವರೆಗೆ ರಾಮಕ್ಷತ್ರೀಯ ಸಮಾಜದವರಿಂದ ಪುರಮೆರವಣಿಗೆಯಲ್ಲಿ ಕೊಂಡೊಯ್ದರು. ಸಂಜೆ ೫:೩೦ರಿಂದ ಸೀತಾಕಲ್ಯಾಣೋತ್ಸವ ಜರುಗಲಿದೆ.