ಡಾ. ಸತೀಶ್ ಪೂಜಾರಿ ಅವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಆರ್ಯಭಟ ಕಲ್ಚರಲ್ ಆರ್ಗನೈಜೇಷನ್ ನೀಡಲಾಗುತ್ತಿರುವ 2015ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಡಾ. ಸತೀಶ್ ಪೂಜಾರಿ ಅವರಿಗೆ ಲಭಿಸಿದೆ. ವೈದ್ಯಕೀಯ ಹಾಗೂ ಸಂಘಟನಾ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

Call us

Click Here

ಸ್ವತಃ ಗಾಯಕರಾದ ಸತೀಶ್ ಪೂಜಾರಿ ಅವರು ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವುದಲ್ಲದೇ ಪ್ರಖ್ಯಾತ ಬಹು ಭಾಷಾ ಗಾಯಕರಾದ ಎಸ್. ಜಾನಕಿ, ವಾಣಿ ಜಯರಾಂ ಅವರ ಸಂಗೀತ ಕಾರ್ಯಕ್ರಮವನ್ನು ಕುಂದಾಪುರದಲ್ಲಿ ಯಶಸ್ವಿಯಾಗಿ ಸಂಘಟಿಸಿದ ಸೈ ಎನಿಸಿಕೊಂಡವರು. ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾಗಿ, ಕೋಟದ ಪರಿವರ್ತನ ರಿಹ್ಯಾಬಿಲಿಟೇಶನ್ ಸೆಂಟರ್‌ನ ನಿರ್ದೇಶಕರಾಗಿ ವೈದ್ಯಕೀಯ ಕ್ಷೇತ್ರದಲ್ಲಿಯೂ ಅನುಪಮ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ

ಇದರೊಂದಿಗೆ ಹ್ಯೂಮನ್ ರೈಟ್ ಫೆಡರೇಶನ್ ಉಡುಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ, ಸಾಲಿಗ್ರಾಮದ ಗುರುನರಸಿಂಹ ವಿವಿಧೋದ್ಧೇಶ ಸಹಕಾರ ಸಂಘದ ನಿರ್ದೇಶಕರಾಗಿ, ಬ್ರಹ್ಮಾವರ ಬಾರ್ಕೂರಿನ ಲಯನ್ಸ್ ಕ್ಲಬ್‌ನ ಸಕ್ರೀಯ ಸದಸ್ಯರಾಗಿ ವೈದ್ಯಕೀಯ, ಸಾಮಾಜಿಕ, ಆರ್ಥಿಕ, ಸಂಗೀತ ಕ್ಷೇತ್ರಗಳಲ್ಲಿ ಇವರು ಸೇವೆ ಸಲ್ಲಿಸುತ್ತಿದ್ದಾರೆ. ಮೇ.18ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

Leave a Reply