Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಗೆ ನುಗ್ಗಿದ ಕಳ್ಳರು. ಮಾಲಿಕನಿಗೆ ಹಲ್ಲೆ ನಡೆಸಿ ದರೋಡೆ
    ಅಪಘಾತ-ಅಪರಾಧ ಸುದ್ದಿ

    ಕೋಟ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಗೆ ನುಗ್ಗಿದ ಕಳ್ಳರು. ಮಾಲಿಕನಿಗೆ ಹಲ್ಲೆ ನಡೆಸಿ ದರೋಡೆ

    Updated:22/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ನುಗ್ಗಿದ್ದ ಕಳ್ಳರು ಮಾಲಕನಿಗೆ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ದರೋಡೆಗೈದ ಘಟನೆ ಕೋಟ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಜುವೆಲ್ಲರ್ಸ್’ನಲ್ಲಿ ನಡೆದಿದೆ. ಪಕ್ಕದ ಅಂಗಡಿಯವರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿಹೋಗಿದ್ದು, ಕಳ್ಳರು ಮಾತ್ರ ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಚಿನ್ನದಂಗಡಿಯ ಮಾಲಕ ರವೀಂದ್ರ ಆಚಾರ‍್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

    Click Here

    Call us

    Click Here

    ಘಟನೆಯ ವಿವರ:
    ಶನಿವಾರ ಸಂಜೆ ವೇಳೆಗೆ ಗ್ರಾಹಕರಂತೆ ಚಿನ್ನದಂಗಡಿಗೆ ತೆರಳಿದ ಅಪರಿಚಿತರು, ಆಭರಣಗಳನ್ನು ತೋರಿಸುವಂತೆ ಮಾಲಿಕ ರವೀಂದ್ರ ಆಚಾರ‍್ಯ ಅವರಲ್ಲಿ ಕೇಳಿಕೊಂಡಿದ್ದಾರೆ. ಮಾಲಕರೂ ಚಿನ್ನದ ಆಭರಣಗಳನ್ನು ತೋರಿಸಿದ್ದಾರೆ. ಇದೇ ಅವಕಾಶವನ್ನು ಬಳಸಿಕೊಂಡ ಗ್ರಾಹಕರು ರವೀಂದ್ರ ಅವರಿಗೆ ತಲೆಗೆ ಹೊಡೆದು ಕೆಳಗೆ ಬೀಳಿಸಿ, ಒಳಗಿನಿಂದಲೇ ಅಂಗಡಿಯ ಶಟರ್ ಹಾಕಿ ಆಭರಣಗಳನ್ನು ಗಂಟುಕಟ್ಟಿದ್ದಾರೆ. ಈ ಘಟನೆ ನಡೆಯುತ್ತಿರುವಾಗ ಪಕ್ಕದ ಅಂಗಡಿಯವರಿಗೆ ಅನುಮಾನ ಬಂದು ಜುವೆಲ್ಲರಿಯ ಮುಚ್ಚಿದ್ದ ಶಟರ್ ಎಳೆದಾಗ ಅಂಗಡಿಯಲ್ಲಿದ್ದ ಕಳ್ಳರು ಪರಾರಿಯಾಗಲು ಯತ್ನಿಸಿದ್ದಾರೆ. ಓರ್ವರನ್ನು ಪಕ್ಕದ ಅಂಗಡಿಯ ಪ್ರಭಾಕರ ಕಾಮತ್ ಹಿಡಿದುಕೊಂಡಿದ್ದರಾದರೂ, ಅಷ್ಟರಲ್ಲಿ ಎರಡು ಬೈಕ್‌ನ್ನು ಸ್ಟಾರ್ಟ್ ಮಾಡಿ ನಿಂತಿದ್ದ ಇರ್ವರು, ಓಡಿ ಬಂದ ಜೊತೆಗಾರರನ್ನು ಕರೆದುಕೊಂಡು ತೆರಳಲು ಯತ್ನಿಸಿದ್ದಾರೆ. ಪಕ್ಕದ ಅಂಗಡಿಯವರ ದರೋಡೆ ಕೋರರು ಕುಳಿತ ಒಂದು ಬೈಕ್‌ನ್ನು ದೂಡಿದ ಪರಿಣಾಮ ಬೈಕ್ ಬಿದ್ದಿದ್ದು, ಬೈಕ್ ಬಿಟ್ಟು ಓರ್ವ ದರೋಡೆಕೋರ ರಸ್ತೆಗೆ ಓಡಿ ತಪ್ಪಿಸಿಕೊಂಡಿದ್ದು, ಇನ್ನೋರ್ವ ಕೋಟ ಕಾಶಿ ಮಠದ ಪಕ್ಕದ ಗಲ್ಲಿಯ ಕತ್ತಲೆಯಲ್ಲಿ ಮರೆಯಾಗಿದ್ದಾನೆ.

    ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದ್ದು ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ, ಗಾಯಗೊಂಡಿದ್ದ ರವೀಂದ್ರ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೋಯ್ಯಿದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ದಾಖಲಿಸಿದ್ದಾರೆ. ಕೋಟ ಪೊಲೀಸ್‌ರು ಸ್ಥಳಕ್ಕೆ ಆಗಮಿಸಿದ ಬಳಿಕ ಸಾರ್ವಜನಿಕರೊಡಗೂಡಿ ಹುಡುಕಾಟ ನಡೆಸಿದ್ದು ಆದರೆ ಯಾವುದೇ ಸುಳಿವು ಸಿಕ್ಕಿಲ್ಲ. ದರೋಡೆ ವೇಳೆ ಪಕ್ಕದ ಅಂಗಡಿಯ ಪ್ರಭಾಕರ ಕಾಮತ್ ಅವರು ತಳ್ಳಾಟದ ಕಾರಣ ಸಾಕಷ್ಟು ಚಿನ್ನದ ಆಭರಣಗಳ ಘಟನಾ ಸ್ಥಳದಲ್ಲಿ ತೊರೆತಿದೆ. ಅಲ್ಲದೇ ಚಿನ್ನದಂಗಡಿಯ ಆಸುಪಾಸಿನ ಬಹುತೇಕ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದ್ದು ಕಳ್ಳರ ಸುಳಿವಿಗಾಗಿ ತನಿಖೆ ನಡೆಸುತ್ತಿದ್ದಾರೆ.

    ಘಟನಾಸ್ಥಳಕ್ಕೆ ಅದೇ ಮಾರ್ಗವಾಗಿ ಸೈಕ್ಲಿಂಗ್ ತೆರಳುತ್ತಿದ್ದ ಉಡುಪಿ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಅಣ್ಣಾಮಲೈ ಮತ್ತು ತಂಡ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು, ತಮ್ಮ ಇಲಾಖೆಯವರಿಗೆ ತನಿಖೆ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಒಟ್ಟಾರೆಯಾಗಿ ಸಾರ್ವಜನಿಕರ ಜನಜಂಗುಳಿ, ರಿಕ್ಷಾ ನಿಲ್ದಾಣ, ಬಸ್ ನಿಲ್ದಾಣ ಇರುವ ಕಡೆಯಲ್ಲಿಯೇ ಕರೆಂಟ್ ಹೋದ ಸಮಯ ನೋಡಿ ಕಳ್ಳತನ ಮಾಡಿರುವುದು ಅನೇಕ ಅನುಮಾನಕ್ಕೆ ಎಡೆಮಾಡಿದೆ.

    ಬ್ರಹ್ಮಾವರ ವೃತ್ತ ನಿರೀಕ್ಷಕ ಅರುಣ್ ಬಿ ನಾಯಕ್, ಕುಂದಾಪುರ ಡಿವೈಎಸ್‌ಪಿ ಮಂಜುನಾಥ್ ಶೆಟ್ಟಿ ಮತ್ತಿತರ ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಶ್ವಾನ ದಳದ ನೆರವು ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ.

    Click here

    Click here

    Click here

    Click Here

    Call us

    Call us

    News BMR_ Kota durga juwellary theft1 News BMR_ Kota durga juwellary theft2

    Kota Sri Durga jewellers theft
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    five × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.