Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಂದಿನಿಂದ ಕುಂದಾಪುರದಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟ. ಚಕ್ರವರ್ತಿ ಟ್ರೋಫಿಗೆ ಸೆಣಸಾಟ
    ಕುಂದಾಪ್ರದ್ ಸುದ್ಧಿ

    ಇಂದಿನಿಂದ ಕುಂದಾಪುರದಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟ. ಚಕ್ರವರ್ತಿ ಟ್ರೋಫಿಗೆ ಸೆಣಸಾಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಅಂತರಾಷ್ಟ್ರೀಯ ಮಾದರಿಯ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಕೂಟದ ಸಿದ್ದತೆಗಳು ಪೂರ್ಣ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ
    ಕುಂದಾಪುರ: ಚಕ್ರವರ್ತಿ ಕ್ರಿಕೆಟ್ ಕ್ಲಬ್ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಡಿ. 24ರಿಂದ 27ರವರೆಗೆ ನಡೆಯಲಿರುವ 5ನೇ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಕೂಟದ ಸಿದ್ಧತೆಗಳು ಪೂರ್ಣಗೊಂಡಿದ್ದು 4 ದಿನಗಳ ಕಾಲ ಕ್ರಿಕೆಟ್ ಪ್ರಿಯರಿಗೆ ರಸದೌತಣ ಸಿಗಲಿದೆ. ಪಂದ್ಯಾಟಕ್ಕಾಗಿ 43 ತಂಡಗಳು ದೇಶದ ಮೂಲೆ ಮೂಲೆಯಿಂದ ಆಗಮಿಸುತ್ತಿದ್ದು ಚಕ್ರವರ್ತಿ ಟ್ರೋಫಿಗಾಗಿ ವೀರಾವೇಶದ ಸೆಣಸಾಟ ನೀಡಲಿದೆ.

    ಈಗಾಗಲೇ ಕ್ರಿಕೆಟ್ ಆಟಗಾರರು, ಕ್ರಿಕೆಟ್ ಅಭಿಮಾನಿಗಳು ಕುಂದಾಪುರಕ್ಕೆ ದೌಡಾಯಿಸುತ್ತಿದ್ದಾರೆ. ನಾಲ್ಕು ದಿನಗಳ ಕಾಲ ಸುಮಾರು 600 ಆಟಗಾರರು ಭಾಗವಹಿಸುವ ನಿರೀಕ್ಷೆಯಿದ್ದು, ಸುಮಾರು 150 ಚಕ್ರವರ್ತಿ ಕ್ರಿಕೆಟ್ ಕ್ಲಬ್‌ನ ಸ್ವಯಂ ಸೇವಕರ ಪಡೆ ಅವರ ಅನುಕೂಲತೆಗಾಗಿ ಸರ್ವ ಸುಸಜ್ಜಿತ ವ್ಯವಸ್ಥೆಯನ್ನು ನೀಡಲು ಸನ್ನದ್ಧವಾಗಿದೆ.

    ಕುಂದಾಪುರದ ಇತಿಹಾಸದಲ್ಲಿ ಪ್ರಥಮ: ಉಡುಪಿ ಮಂಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕುಂದಾಪುರದಲ್ಲಿ ಅಂತರಾಷ್ಟ್ರೀಯ ಪಂದ್ಯಕೂಟದ ಮಾದರಿಯಲ್ಲಿ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿರುವುದು ಕುಂದಾಪುರದ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ ಎಂಬುವುದು ಕ್ರಿಕೆಟ್ ಪ್ರೇಮಿಗಳ ಅಭಿಮತ. ತೃತೀಯ ಅಂಪೈರ್, ಮೈದಾನದಲ್ಲಿ ನೇರಪ್ರಸಾರ ವೀಕ್ಷಿಸಲು ಎರಡು ಬೃಹತ್ ಎಲ್‌ಇಡಿ ಡಿಜಿಟಲ್ ವಾಲ್, ಪಂದ್ಯಾಟದಲ್ಲಿ ತೊಡಗಿರುವ ಎರಡು ತಂಡಗಳಿಗೆ ಡಗೌಟ್ಸ್, ಐಪಿಎಲ್ ಮಾದರಿಯಲ್ಲಿ ಡಿಜೆ ಸಂಗೀತ, ಹೆಲಿಕ್ಯಾಮ್ ಮೂಲಕ ಮೈದಾನದ ಪಕ್ಷಿನೋಟದ ಚಿತ್ರಿಕರಣ, ಬೌಂಡರಿ ಗೆರೆಗಳಿಗೆ ರಂಗುರಂಗಿನ ಕವಚ ಮುಂತಾದ ಹಲವಾರು ವಿನೂತನ ವ್ಯವಸ್ಥೆಯನ್ನು ಈ ಬಾರಿಯ ಟೂರ್ನಿಯಲ್ಲಿ ಮಾಡಲಾಗಿದೆ. ಈ ಪಂದ್ಯಕೂಟದ ಇನ್ನೊಂದು ವಿಶೇಷ ಆಕರ್ಷಣೆಯಾಗಿ ವಿಶಿಷ್ಟ ಮಾದರಿಯ ಪಾನೀಯ ವಾಹನದ ವ್ಯವಸ್ಥೆಯನ್ನು ಮಾಡಲಾಗಿದ್ದು, ಕ್ರೀಡಾಪ್ರೇಮಿಗಳ ಮೆಚ್ಚುಗೆ ಪಾತ್ರವಾಗಲಿದೆ. ಪಂದ್ಯಕೂಟದ ವೀಕ್ಷಣೆಗೆ ಅಪಾರ ಸಂಖ್ಯೆಯಲ್ಲಿ ಪ್ರೇಕ್ಷಕರು ಭಾಗವಹಿಸುವ ಸಾಧ್ಯತೆ ಇದ್ದು, ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಚಕ್ರವರ್ತಿ ಕ್ರಿಕೆಟ್ ಕ್ಲಬ್ ತನ್ನ ವಿಭಿನ್ನವಾದ ವೈಶಿಷ್ಟತೆಯಿಂದ ಈ ಬಾರಿಯ ಕ್ರಿಕೆಟ್ ಟೂರ್ನಮೆಂಟ್ ಮೂಲಕ ಎಲ್ಲರನ್ನು ಮಂತ್ರ ಮುಗ್ಧರನ್ನಾಗಿಸಲಿದೆ. (ಕುಂದಾಪ್ರ ಡಾಟ್ ಕಾಂ)

    ಸಂಜೆ ಚಾಲನೆ: ಈ ಟೂರ್ನಿಯ ಉದ್ಘಾಟನೆಯನ್ನು ಡಿಸೆಂಬರ್ 24ರ ಸಂಜೆ 6:30ಕ್ಕೆ ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ ನೆರವೇರಿಸಲಿದ್ದಾರೆ. ಕುಂದಾಪುರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಹುಮಾನ ವಿತರಣಾ ಸಮಾರಂಭ ಡಿಸೆಂಬರ್ 27ರ ರಾತ್ರಿ ನಡೆಯಲಿದ್ದು ಕ್ರಿಕೆಟ್ ಹಾಗೂ ಸಿನಿಮಾ ತಾರೆಯರು ಭಾಗವಹಿಸಿ ಸಮಾರಂಭಕ್ಕೆ ಹೆಚ್ಚಿನ ರಂಗು ನೀಡಲಿದ್ದಾರೆ. ಒಟ್ಟಾರೆ ಕುಂದಾಪುರದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು, ಈ ದಿನಕ್ಕೆ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳು ಕುಂದಾಪುರದೆಡೆ ದೌಡಾಯಿಸುತ್ತಿದ್ದಾರೆ. ಚಕ್ರವರ್ತಿಗಳ ಕಿರೀಟಕ್ಕೆ ಇನ್ನೂಂದು ಚಿನ್ನದ ಗರಿ ಸೇರಿಕೊಳ್ಳಲಿದೆ.

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ:

    ಡಿ.24ರಿಂದ ಚಕ್ರವರ್ತಿ ಕ್ರಿಕೆಟ್ ಕ್ಲಬ್‌ ಆಶ್ರಯದಲ್ಲಿ 5ನೇ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟ – http://kundapraa.com/?p=9456 .

    IMG-20151223-WA0058 IMG-20151223-WA0091

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    9 − two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.