ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ನನಗೆ ದೂರು ಕೊಡಿ. ಸಾರ್ವಜನಿಕರು ಯಾರೇ ಅರ್ಜಿ, ಮನವಿ ಸಲ್ಲಿಸಿದರೂ ತಿಂಗಳೊಳಗೆ ಅವರ ಸಮಸ್ಯೆ ಪರಿಹಾರ ಮಾಡಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಾಕೀತು ಮಾಡಿದ್ದಾರೆ.
ಅವರು ಕೋಟೇಶ್ವರ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಫಲಾನುಭವಿಗಳಿಗೆ ವಿವಿಧ ಸೌಲತ್ತು ವಿತರಿಸಿ ಮಾತನಾಡುತ್ತಿದ್ದರು. ಸರಕಾರದ ವ್ಯವಸ್ಥೆ ಹಾಗೂ ಸೌಲಭ್ಯಗಳು ನಾಗರಿಕರಿಗೆ ನೇರವಾಗಿ ತಲುಪಿಸುವ ನಿಟ್ಟಿನಲ್ಲಿ ಜನ ಸಂಪರ್ಕ ಸಭೆ ನಡೆಸಲಾಗುತ್ತದೆ. ರಾಜ್ಯ ಸರಕಾರ ಜನ ಕಲ್ಯಾಣಕ್ಕಾಗಿ ಹಲವಾರು ಯೋಜನೆ ನೀಡಿದ್ದು, ಅದನ್ನು ಜನ ಸಾಮಾನ್ಯರಿಗೆ ಮುಟ್ಟಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ಸಾಮಾನ್ಯರ ಕೆಲಸಗಳಿಗೆ ಲಂಚ ಕೇಳಿದರೆ ಸುಮ್ಮನಿರೋದಿಲ್ಲ. ಅಧಿಕಾರಿಗಳು ಜನರ ಸಮಸ್ಯೆಗೆ ಶೀಘ್ರ ಸ್ಪಂದಿಸುವಂತೆ ಸೂಚಿಸಿದರು.
ಇದೇ ಸಂಸರ್ಭದಲ್ಲಿ ವಿವಿಧ ಫಲಾನುಭವಿಗಳಿಗೆ ವಿತರಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯರಾದ ಲಕ್ಷ್ಮೀ ಮಂಜು ಬಿಲ್ಲವ. ಶ್ರೀಲತಾ ಸುರೇಶ್ ಶೆಟ್ಟಿ, ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ಜನಕಿ ಬಿಲ್ಲವ, ಜಿಪಂ ಸಿಒ ಪ್ರಿಯಾಂಕ ಮೇರಿ ಫೆರ್ನಾಂಡಿಸ್, ಕುಂದಾಪುರ ಉಪವಿಭಾಗಾಧಿಕಾರಿ ಅಶ್ವಥಿ ಎಸ್., ಕುಂದಾಪುರ ಡಿಎಸ್ಪಿ ಪ್ರವೀಣ್ ಎಚ್.ನಾಯ್ಕ್ ಇದ್ದರು. ಕುಂದಾಪುರ ತಹಸೀಲ್ದಾರ್ ಜಿ.ಎಂ.ಬೋರ್ಕರ್ ಸ್ವಾಗತಿಸಿದರು. ಅಕ್ಷರ ದಾಸೋಹ ಅಧಿಕಾರಿ ಸೀತಾರಾಮ ಶೆಟ್ಟಿ ನಿರೂಪಿಸಿದರು. ಕುಂದಾಪುರ ಇಒ ಚೆನ್ನಪ್ಪ ಮೋಯಿಲಿ ವಂದಿಸದರು.