ಅನರ್ಹ ಪಡಿತರ ಚೀಟಿ ಹಿಂತಿರುಗಿಸಲು ಜೂ.30 ಕೊನೆಯ ದಿನ: ಜಿಲ್ಲಾಧಿಕಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ 2011 ರಜನಗಣತಿಯಲ್ಲಿ 2,95,984 ಕುಟುಂಬಗಳು ದಾಖಲಾಗಿದ್ದು, ಪ್ರಸ್ತುತ ಮೇ ಅಂತ್ಯದವರೆಗೆ 28,264 ಅಂತ್ಯೋದಯಅನ್ನ ಮತ್ತು 1,61,987 ಆದ್ಯತಾ ಸೇರಿಒಟ್ಟು 1,90,251 ಕುಟುಂಬಗಳಿಗೆ ಆದ್ಯತಾ (ಬಿ.ಪಿ.ಎಲ್) ಪಡಿತರಚೀಟಿ ಹಾಗೂ 1,05,733 ಕುಟುಂಬಗಳಿಗೆ ಆದ್ಯತೇತರ (ಎಪಿಎಲ್) ಪಡಿತರಚೀಟಿ ನೀಡಲಾಗಿರುತ್ತದೆ.

Call us

Call us

Call us

ವೇತನವನ್ನುಗಣನೆಗೆ ತೆಗೆದುಕೊಳ್ಳದ ಸರ್ಕಾರದಅಥವಾ ಸರ್ಕಾರದಿಂದಅನುದಾನ ಪಡೆಯುತ್ತಿರುವ ಸಂಸ್ಥೆಗಳು ಹಾಗೂ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯತೆರಿಗೆ, ಸೇವಾ ತೆರಿಗೆ, ವ್ಯಾಟ್ ಹಾಗೂ ವೃತ್ತಿತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಭಾಗದಲ್ಲಿಮೂರು ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವಾದ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷರೂ.ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ ಅನ್ನ ಮತ್ತುಆದ್ಯತಾ ಪಡಿತರ (ಬಿಪಿಎಲ್) ಪಡೆಯಲು ಅರ್ಹರಿರುವುದಿಲ್ಲ.

Call us

Call us

ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಿ, ಆದ್ಯತೇತರ ಪಡಿತರಚೀಟಿಯನ್ನು ಪಡೆದಿರುತ್ತಾರೆ. ಸರ್ಕಾರ ನಿಗಧಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿಆದ್ಯತಾ (ಬಿಪಿಎಲ್) ಪಡಿತರಚೀಟಿ ಹೊಂದಿರುವವರುಜೂನ್ 30 ರ ಒಳಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಒಪ್ಪಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ಪಡೆದುಕೊಳ್ಳಬೇಕು.

ತಪ್ಪಿದಲ್ಲಿ ಅಕ್ರಮ ಪಡಿತರಚೀಟಿ ಹೊಂದಿರುವವರ ವಿರುದ್ಧಅಗತ್ಯ ವಸ್ತುಗಳ ಕಾಯ್ದೆ 1955, ಕರ್ನಾಟಕ ಅನಧಿಕೃತ ಪಡಿತರಚೀಟಿ ಹೊಂದುವುದರ ತಡೆ ಆದೇಶ 1977 ಹಾಗೂ ಐಪಿಸಿ ಕಲಂಗಳಡಿಯಲ್ಲಿ ಕ್ರಮ ಜರುಗಿಸಿ, ಹಂಚಿಕೆ ಪಡೆದ ಆಹಾರಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲಿ ಮಾಡಲಾಗುವುದು ಎಂದುಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

18 + twelve =