ಅನುಮತಿಯಿಲ್ಲದೇ ಸಭೆ – ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು: ಜಿಲ್ಲಾಧಿಕಾರಿ ಜಿ. ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಅ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ಈ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೆ, ನಿಯಮ ಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳು ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂಬ ಅಂಶವನ್ನು ಸಂಘಟಕರು ಅರಿತುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಿಂದಾಗಿ ಕೋವಿಡ್ -19 ನ್ನು ಹರಡುವ ಸಾಧ್ಯತೆಯಿದ್ದು, ಈ ಕಾರ್ಯಕ್ರಮಗಳ ಸಂಘಟಕರ ಮೇಲೆ ಕಡ್ಡಾಯವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

Click Here

Call us

Call us

ಪೂರ್ವಾನುಮತಿಯ ಮೇರೆಗೆ ಜರುಗುವ ಮದುವೆ / ಇತರೆ ಸಭೆ ಸಮಾರಂಭ, ಸನ್ಮಾನ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಆದೇಶದನ್ವಯ , ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಗ್ಲೌಸ್, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಶುಚಿತ್ವ ಕಾಪಾಡಿಕೊಳ್ಳುವಿಕೆಗೆ ಹಾಗೂ ಇತರ ಎಸ್.ಓ.ಪಿ. ಕ್ರಮಗಳು ಯಥಾ ರೀತಿಯಲ್ಲಿ ಪಾಲನೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸಂಬಂಧಿಸಿದ ತಹಶೀಲ್ದಾರರು/ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು/ ಉಡುಪಿ ನಗರಸಭೆ ಪೌರಾಯುಕ್ತರು / ಮುಖ್ಯಾಧಿಕಾರಿಗಳು/ ಗ್ರಾಮ ಲೆಕ್ಕಾಧಿಕಾರಿಗಳು/ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು/ ಹಾಗೂ ಆಯಾ ಇಲಾಖಾ ಸಿಬ್ಬಂದಿ ವರ್ಗದವರು ಖುದ್ದಾಗಿ ಭೇಟಿ ನೀಡಿ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Click here

Click Here

Call us

Visit Now

ಸೂಕ್ತ ಸಾಮಾಜಿಕ ಅಂತರದ ಕೊರತೆ ಹಾಗೂ ಇತರೆ ಕಟ್ಟುನಿಟ್ಟಿನ ನಿಯಮ ಪಾಲನೆಯಾಗದ ಕಾರಣಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವ ವಾಸ್ತವದ ದಿನಗಳಲ್ಲಿ, ಸನ್ಮಾನದಂತಹ ಕಾರ್ಯಕ್ರಮಗಳಿಗೆ ಅನುಮತಿಯನ್ನು ನೀಡುವುದು ಸೂಕ್ತವಲ್ಲವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

seventeen + 2 =