ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸೋಮವಾರ ಬೈಂದೂರು ಪೊಲೀಸ್ ಠಾಣೆಯ ವತಿಯಿಂದ ಡಿಡಿಯುಕೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕಾನೂನಿನ ಬಗೆಗೆ ಅರಿವು ಹಾಗೂ ಅಪರಾಧ ಜರುಗದಂತೆ ಎಚ್ಚರ ವಹಿಸುವುದು ಅಗತ್ಯವಾಗಿದ್ದು, ಯುವಶಕ್ತಿ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು.
ಡಿಡಿಯುಕೆ ವಿದ್ಯಾರ್ಥಿಗಳು ಅಪರಾಧ ತಡೆ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾ ನಡೆಸಿದರು. ಕಾರ್ಯಕ್ರಮದಲ್ಲಿ ಬೈಂದೂರು ಪಿಎಸ್ಐ ಸಂಗೀತಾ, ಎ.ಎಸ್.ಐ ವಿವೇಕ್ ಹಾಗೂ ಶಿಕ್ಷಕರು ವೃಂದದವರು ಪಾಲ್ಗೊಂಡಿದ್ದರು.