ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಉಡುಪಿ ಜಿಲ್ಲೆಯವರಿಂದ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕೇತ್ರದಲ್ಲಿ ಹೊಂದಿರುವ ಅಸಾಧಾರಣ ಪ್ರತಿಭೆಯನ್ನು ಗುರುತಿಸಿ ೨೦೧೬-೧೭ನೇ ಸಾಲಿನಲ್ಲಿ ಪರಮೇಶ್ವರ ಐತಾಳ ಕೋಟೇಶ್ವರ ಇವರ ಪುತ್ರಿ ಅಶ್ವಿನಿ ಬಿ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಅಶ್ವಿನಿಯು ಸೇವಾ ಸಂಗಮ ವಿದ್ಯಾಕೇಂದ್ರದ ೫ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಶಾಲೆಗೆ ಕೀರ್ತಿ ತಂದಿರುವರು. ಅಶ್ವಿನಿಗೆ ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕರು ಅಭಿನಂದಿಸಿದ್ದಾರೆ.
ಅಶ್ವಿನಿಗೆ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ
