ಅ.14: ಸರಕಾರಿ ಹಾಸ್ಟೇಲ್ ಹೊರಗುತ್ತಿಗೆ ನೌಕರರ ಹೋರಾಟ

Call us

ಕುಂದಾಪುರ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುತ್ತಿರುವ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಮುಖ್ಯ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರು, ಜವಾನರು, ಕಸ ಹೊಡೆಯುವವರು, ಸ್ವಚ್ಚತಾ ಸಿಬ್ಬಂದಿ ಮುಂತಾದ ನೌಕರರು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಕುಂದಾಪುರ ಕಾರ್ಮಿಕ ಭವನದಲ್ಲಿ ಬೃಹತ್ ಸಮಾವೇಶವು ಜರಗಿತು.

Call us

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ಹಾಸ್ಟೆಲ್ ಸರಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘದ ಅಡಿಯಲ್ಲಿ ಅನೇಕ ಸಲ ಜಿಲ್ಲಾ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿ ತಮಗೆ ಸರಕಾರವೇ ನಿಗದಿಪಡಿಸಿದ ತುಟ್ಟಿಭತ್ಯೆ ಸಹಿತರ ಕನಿಷ್ಟ ವೇತನ ಹಾಗೂ ಇತರ ಕಾನೂನು ಬದ್ಧ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸುತ್ತಾ ಬಂದಿದ್ದಾರೆ. ಈ ಅನಿಷ್ಠ ಹೊರಗುತ್ತಿಗೆ ಪದ್ಧತಿ ರದ್ದು ಮಾಡಿ ಎಲ್ಲಾ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಲು ಇದೇ ಅಕ್ಟೋಬರ್ 14 ರಿಂದ ಬೆಂಗಳೂರಿನಲ್ಲಿ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೃಹತ್ ಅನಿರ್ಧಿಷ್ಟ ಸಾಮೂಹಿಕ ಸತ್ಯಾಗ್ರಹ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸರಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘದ ಬೆಂಗಳೂರು ಚಲೋ ಹೋರಾಟಕ್ಕೆ ಪ್ರಭಾಕರ ಮಿಯಾರ್ ಶುಭಕೋರಿದರು. ಮುಖಂಡರಾದ ರಾಜೀವ ಪಡುಕೋಣೆ, ಗಜಾನನ ಉಡುಪಿ, ರಾಜೇಶ ಕಾರ್ಕಳ, ಹರೀಶ ಪೂಜಾರಿ, ಬೈಂದೂರು, ಉದಯ ಕುಂದಾಪುರ, ಪ್ರೀತಿ, ಪ್ರೇಮಾ, ಕುಂದಾಪುರ, ಬೇಬಿ ಬೈಂದೂರು, ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಂಜುನಾಥ ಮಯ್ಯಾಡಿ, ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.

Leave a Reply

Your email address will not be published. Required fields are marked *

1 − 1 =