ಅ. 4 : ಕುಂದಾಪುರದಲ್ಲಿ ಅಪರಾಧ ತಡೆ ಜಾಗೃತಿ ರೆಡ್ ಸುರಕ್ಷಾ ಅಭಿಯಾನ

Call us

ಕುಂದಾಪುರ: ಮಂಗಳೂರಿನ ರೆಡ್ ಎಫ್.ಎಮ್ 93.5 ಪ್ರಸ್ತುತ ಪಡಿಸುವ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ಹೋಟೆಲ್ ಪಾರಿಜಾತದ ಪ್ರಾಯೋಜಕತ್ವದಲ್ಲಿ ಅ. 4ರಂದು ಬೆಳಿಗ್ಗೆ 9 ಕ್ಕೆ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ರೆಡ್ ಸುರಕ್ಷಾ ಅಭಿಯಾನ ಸೀಸನ್-2 ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುವಂತಹ ಉಡುಪಿ ಜಿಲ್ಲಾ ಮಟ್ಟದ ಅಂತರ್‌ಕಾಲೇಜು ಸ್ಕಿಟ್ ಕಾಂಪಿಟೇಶನ್ ನಡೆಯಲಿದೆ.

Call us

Call us

ಉಡುಪಿ ಜಿಲ್ಲಾ ಅಧೀಕ್ಷಕರಾದ ಅಣ್ಣಾಮಲೈ ಪೂರ್ಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಲಿದ್ದಾರೆ. ಹೆಚ್ಚುವರಿ ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಸಂತೋಷ ಕುಮಾರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಪರಾಧ ತಡೆ ಕುರಿತು ಮಾಹಿತಿಯನ್ನೊಳಗೊಂಡ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಪಾಲನೆಯ ಅಗತ್ಯತೆಯ ಅರಿವು, ಮಾಹಿತಿ ಲಭ್ಯವಾಗಲಿದೆ. ಈ ಉಪಯುಕ್ತ ಮಾಹಿತಿ ಕಾರ್ಯಕ್ರಮದಲ್ಲಿ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಸಂಯೋಜಕ ಪ್ರವೀಣ ಟಿ. ತಿಳಿಸಿದ್ದಾರೆ

Leave a Reply

Your email address will not be published. Required fields are marked *

10 + five =