ಆದಾಯವಿಲ್ಲದ ದೇವಳದ ದತ್ತ ಸ್ವೀಕಾರಕ್ಕೆ ಕ್ರಮ: ಮುಜರಾಯಿ ಸಚಿವ ರುದ್ರಪ್ಪ ಲಮಾಣಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು: ಜವುಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರು ಕುಟುಂಬ ಸಮೇತರಾಗಿ ಕೊಲ್ಲೂರಿಗೆ ಆಗಮಿಸಿ ಬುಧವಾರ ತನ್ನ 60ನೇ ಹುಟ್ಟುಹಬ್ಬದ ಸಲುವಾಗಿ ಚಂಡಿಕಾ ಹೋಮ ಸೇವೆ ಸಲ್ಲಿಸಿದರು.

ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಆರ್ಥಿಕವಾಗಿ ಬಲಿಷ್ಠವಾಗಿರುವ ಮುಜರಾಯಿ ದೇವಸ್ಥಾನಗಳನ್ನು ಗುರುತಿಸಿ ಆ ಮೂಲಕ ಮುಜರಾಯಿ ಇಲಾಖೆಯ ಆದಾಯವಿಲ್ಲದ ಸಣ್ಣ ದೇವಸ್ಥಾನಗಳನ್ನು ದತ್ತು ಸ್ವೀಕರಿಸಿ ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಲ್ಲೂರು ದೇವಸ್ಥಾನದಲ್ಲಿರುವ 76 ನೌಕರರನ್ನು ಖಾಯಂಗೊಳಿಸುವ ಬಗ್ಗೆ ಸರಕಾರದೊಡನೆ ಚರ್ಚಿಸಲಾಗಿದ್ದು ಅತೀ ಶೀಘ್ರದಲ್ಲೇ ಅವರನ್ನು ಖಾಯಂಗೊಳಿಸಲಾಗುವುದು ಎಂದರು.

Call us

ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿನ ಕಾರ್ಯನಿರ್ವಹಧಿಣಾಕಾರಿ ಸಹಿತ ಖಾಲಿ ಇರುವ ಹುದ್ದೆಗಳಿಗೆ ತತ್‌ಕ್ಷಣ ನೇಮಕ ಮಾಡಲಾಗುವುದು. ಕೊಲ್ಲೂರಿನಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಹಮ್ಮಿಕೊಳ್ಳಲಾದ ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಭೋಜನ ಶಾಲೆ ನಿರ್ಮಾಣದ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದ್ದು ಆ ಮೂಲಕ ಕೊಲ್ಲೂರಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಟ್ಟು ಶ್ರಮಿಸಲಾಗುವುದು ಎಂದು ತಿಳಿಸಿದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಗಳಿಗೆ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಪ್ರತಿಧಿಯೊಂದು ದೇವಸ್ಥಾನದ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಪ್ರತಿ ದೇವಸ್ಥಾನಗಳಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆ ಬದ್ಧವಾಗಿದ್ದು ದೇವಸ್ಥಾನಗಳ ಪರಿಸರದಲ್ಲಿ ಮಾಲಿನ್ಯವಾಗದಂತೆ ನಿಗಾ ವಹಿಸಲು ಸೂಚಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜನಾರ್ದನ, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯಧಿರಾಮ ಶೆಟ್ಟಿ, ರಮೇಶ್‌ ಗಾಣಿಗ, ನರಸಿಂಹ ಹಳಗೇರಿ, ಜಯಂತಿ ಪಡುಕೋಣೆ, ಅರ್ಚಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

one × 5 =