ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷಾ ನೇಮಕಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಸಂಯೋಜಿತ ಪದವಿ ಮಟ್ಟದ ಪರೀಕ್ಷೆ – 2020 ಹುದ್ದೆಗಳಿಗೆ ಕಂಪ್ಯೂಟರ್ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷಾ ನೇಮಕಾತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ಪದವಿ ಶಿಕ್ಷಣ ಅಥವಾ ತತ್ಸಮಾನ ಪರೀಕ್ಷೆ ಹೊಂದಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳ ಮೂಲಕ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ https://ssc.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆನ್‌ಲೈನ್ ನೊಂದಣಿಗೆ ಜನವರಿ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520, 0820-2574869 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

eighteen − 15 =