ಆರ್.ಟಿ.ಐ ಮತ್ತು ಸಿವಿಸಿ ಕುರಿತ ಅರಿವು ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದೇಶದ ನಾಗರಿಕರಾಗಿ ನಮಗೆ ಲಭ್ಯವಿರುವ ಹಕ್ಕುಗಳ ಅರಿವನ್ನು ಹೊಂದಿರಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ. ಮಾಹಿತಿ ಹಕ್ಕು ಕಾಯಿದೆ ಮತ್ತು ಕೇಂದ್ರ ವಿಚಕ್ಷಣಾ ಆಯೋಗವನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ, ಖಂಡಿತ ಭ್ರಷ್ಟಚಾರ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು.

Call us

Call us

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಆರ್.ಟಿ.ಐ ಮತ್ತು ಸಿವಿಸಿ ಕುರಿತಾಗಿನ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಇನ್ನಿತರ ಸಾಮಾನ್ಯ ಕಾಯಿದೆಗಳ ಬಗೆಗಿನ ಅರಿವು ಮತ್ತದರ ಬಳಕೆಯಿಂದ ನಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚುವುದರ ಜೊತೆಗೆ ವಿಶೇಷವಾಗಿ ಸರಕಾರಿ ವಲಯಗಳಲ್ಲಿನ ಕಾರ್ಯಗಳಲ್ಲಿ ಧನಾತ್ಮಕ ಬದಲಾವಣೆಯನ್ನು ನಿರೀಕ್ಷಿಸಲು ಸಾಧ್ಯವಿದೆ. ಇಡೀ ಸಮಾಜಕ್ಕೆ ಈ ಕುರಿತಾದ ಅರಿವನ್ನು ಮೂಡಿಸುವಲ್ಲಿ ನಾವು ಕೈಜೋಡಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

Call us

Call us

ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶ್ರೇಯ ಎನ್. ಖಾರ್ವಿ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ ಕಾರ್ಯಕ್ರಮವನ್ನು ನಿರ್ವಹಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

four × 2 =