ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ತುಳುನಾಡಿನ ದೈವಾರಾಧನೆ ಕುರಿತು ಸೋನು ಕ್ರಿಯೇಷನ್ಸ್ ನಿರ್ಮಾಣ ಮಾಡಿರುವ ‘ಧರ್ಮದೈವ’ ತುಳು ಕಿರುಚಿತ್ರವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.
ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಮೋಹನ್ ಆಳ್ವ ಮಾತನಾಡಿ, ದೈವಾರಾದನೆ ತುಳುನಾಡಿನ ಸಂಸ್ಕೃತಿ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ. ಅಲ್ಲದೇ ಈ ವಿಚಾರಗಳು ಬರೀ ಮೂಢನಂಬಿಕೆಯಲ್ಲ, ಇಡೀ ತುಳು ಸಮಾಜವೇ ದೈವಾರಾಧನೆಯ ನಂಬಿಕೆಯ ಮೇಲೆ ನಿಂತಿದೆ ಎಂದರು.
ಧರ್ಮದೈವ ಕಿರುಚಿತ್ರ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಅಕಾಡೆಮಿ ಮತ್ತು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ ಅಭಿಪ್ರಾಯಪಟ್ಟರು. ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನ ಮಾಡಿದ್ದು, ಸುಧಾಕರ್ ಪಡೀಲ್ ನಿರ್ಮಾಣ ಮಾಡಿದ್ದಾರೆ.