ಆಳ್ವಾಸ್‌ನ ಎಂಟು ಮಂದಿಗೆ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ರಾಜ್ಯ ಸರ್ಕಾರವು ಕ್ರೀಡಾ ಸಾಧಕರಿಗೆ ನೀಡಿದ ಏಕಲವ್ಯ ಹಾಗೂ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಒಟ್ಟು ಎಂಟು ಕ್ರೀಡಾ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರೆಲ್ಲರೂ ಆಳ್ವಾಸ್‌ನ ದತ್ತು ಸ್ವೀಕಾರ ಯೋಜನೆಯಡಿ ತರಬೇತಿ ಪಡೆದು ಸಾಧನೆಗೈದ ಕ್ರೀಡಾಪಟುಗಳಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Click Here

Call us

Call us

ಅಭಿನಯ ಶೆಟ್ಟಿ, ಬಾಂಧವ್ಯ, ಅಭಿಷೇಕ್‌ಶೆಟ್ಟಿಯವರು ಏಕಲವ್ಯ ಪ್ರಶಸ್ತಿ ಹಾಗೂ ಜಯಲಕ್ಷ್ಮೀ ಜೆ ,ಲಾವಣ್ಯ ಬಿ. ಡಿ, ರಕ್ಷಿತ್ ಎಸ್, ಪಲ್ಲವಿ ಎಸ್ ಕೆ, ಮತ್ತು ಅನುಶ್ರೀ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Click here

Click Here

Call us

Visit Now

ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಅಭಿಷೇಕ್ ಶೆಟ್ಟಿ ಅಥ್ಲೆಟಿಕ್‌ನಲ್ಲಿ2009ರ ಸಾಲಿನ ಪ್ರಶಸ್ತಿ ಗಳಿಸಿದ್ದಾರೆ. ಅಂತರಾಷ್ಟ್ರೀಯ ಕ್ರೀಡಾಪಟುವಾಗಿದ್ದು ಪ್ರಸ್ತುತ ಪಶ್ಚಿಮ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಬಾಂಧವ್ಯ ಬಾಸ್ಕೆಟ್‌ಬಾಲ್‌ನಲ್ಲಿ 2008ರ ಏಕಲವ್ಯ ಪ್ರಶಸ್ತಿ ಗಳಿಸಿದ್ದು ಅಂತರಾಷ್ರ್ಟೀಯ ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿದ್ದಾರೆ. ಪ್ರಸುತ್ತ ದಕ್ಷಿಣ ಪಶ್ಚಿಮ ರೈಲ್ವೆ ಉದ್ಯೋಗಿ.

ಅಂತರಾಷ್ಟ್ರೀಯ ಕ್ರೀಡಾಪಟು ಅಭಿನಯ ಶೆಟ್ಟಿ ಅಥ್ಲೆಟಿಕ್ಸ್‌ನಲ್ಲಿ2019ರ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದು ಪ್ರಸ್ತುತ ಪಶ್ಚಿಮ ರೈಲ್ವೆ ಉದ್ಯೋಗಿಯಾಗಿದ್ದಾರೆ.ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ ವಿಜೇತ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿ ಜಯಲಕ್ಷ್ಮೀ  ಜೆ. 2017ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ವಿಜೇತೆಯಾಗಿದ್ದು ಪ್ರಸುತ್ತ ಆಳ್ವಾಸ್ ಸಂಸ್ಥೆಯಲ್ಲಿ ತರಬೇತುದಾರರಾಗಿದ್ದಾರೆ. ಲಾವಣ್ಯ ಬಿ.ಡಿ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ 2018ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪಡೆದಿದ್ದು, ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಆಟಗಾರ್ತಿಯಾಗಿದ್ದಾರೆ. ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಆಟಗಾರ್ತಿ ಪಲ್ಲವಿ ಎಸ್.ಕೆ ಬಾಲ್ ಬ್ಯಾಡ್ಮಿಂಟನ್‌ನಲ್ಲಿ2019ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ.

Call us

ಏಷ್ಯನ್ ಜೂನಿಯರ್ ಚಾಂಪಿಯನ್ ಶಿಪ್‌ನಲ್ಲಿ ಸ್ವರ್ಣ ಪದಕ ವಿಜೇತ ಹಾಗೂ ಪ್ರೊ ಕಬಡ್ಡಿ ಆಟಗಾರ ರಕ್ಷಿತ್ ಎಸ್. ಕಬಡ್ಡಿಯಲ್ಲಿ2019ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ. ಅಖಿಲ ಭಾರತ ಹಿಂದ್ ಕೇಸರಿ ಪ್ರಶಸ್ತಿ ವಿಜೇತೆ ಅನುಶ್ರೀ ಕುಸ್ತಿಯಲ್ಲಿ 2017ರ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ವಿಜೇತೆಯಾಗಿದ್ದಾರೆ

ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು ನಿರಂತರವಾಗಿ ಏಳನೇ ಬಾರಿಗೆ ಕ್ರೀಡಾರತ್ನ ಪ್ರಶಸ್ತಿ ಗಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆಳ್ವಾಸ್ ಶಿಕ್ಷಣ ಸಂಸ್ಥೆ ಕ್ರೀಡೆಯಲಿ ತೋರಿದ ಗಣನೀಯ ಸಾಧನೆಗಾಗಿ ಕ್ರೀಡಾ ಪೋಷಕ್ ಪ್ರಶಸ್ತಿಯನ್ನು ಗಳಿಸಿತ್ತು ಎಂದು ಮೋಹನ ಆಳ್ವ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

4 × 2 =