ಕುಂದಾಪ್ರ ಡಾಟ್ ಕಾಂ ಸುದ್ದಿ
ಮೂಡುಬಿದಿರೆ: ಬಳ್ಳಾರಿಯಲ್ಲಿ ನಡೆದ ಅಖಿಲ ಭಾರತ ಆಹ್ವಾನಿತ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ವಿಭಾಗದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಬಳ್ಳಾರಿಯ ಶ್ರವಣ ಸ್ಪೀಚ್ ಅಂಡ್ ಹಿಯರಿಂಗ್ ಸಂಸ್ಥೆ, ಬಳ್ಳಾರಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಇವುಗಳ ಸಹಯೋಗದೊಂದಿಗೆ ನೆಡೆದ ಟೂರ್ನಿ ಅಲ್ಲಿ ಮೂಡಬಿದ್ರೆಯ ಆಳ್ವಾಸ್ ತಂಡ ಮಹಿಳಾ ವಿಭಾಗದಲ್ಲಿ ಟೂರ್ನಿಯ ಪೂರ್ತಿ ಗಮನಾರ್ಹ ಪ್ರದರ್ಶನ ನೀಡಿತು.
ಸೂಪರ್ ಲೀಗ್ ಪಂದ್ಯಗಳ 3 ಪಂದ್ಯಗಳಲ್ಲಿ ನೇರ ಸೆಟ್ ದಾಖಲಿಸಿದಲ್ಲದೆ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈನ ಎಸ್ಆರ್ಎಂ ವಿಶ್ವವಿದ್ಯಾಲಯ ತಂಡವನ್ನು 35-19 ಹಾಗೂ 35-24 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಗಳಿಸಿತು.