ಆಳ್ವಾಸ್ ‘ತನು – ಮನ’ 2021 ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ವಿದ್ಯಾರ್ಥಿ ಸಂಘ ‘ತನು – ಮನ’ದ 2021ರ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಕುರಿಯನ್, ಉತ್ತಮ ನಡವಳಿಕೆ ನಮ್ಮ ಅಸ್ತಿತ್ವವನ್ನು ರೂಪಿಸುತ್ತದೆ, ನಾವು ಮಾಡುವ ಕಾರ್ಯಗಳೇ ನಮ್ಮ ಅಸ್ತಿತ್ವ ಎಂದರು.

ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ‘ಮನೋವಿಜ್ಞಾನದ ವಿಚಾರಗಳನ್ನು ಅರ್ಥೈಸಿಕೊಳ್ಳುವುದು ಸವಾಲಿನ ಕೆಲಸ ಅದರಲ್ಲೂ ಅಸ್ತಿತ್ವವನ್ನು ರೂಪಿಸಿಕೊಳ್ಳಬೇಕಾದರೆ ಹವ್ಯಾಸಗಳನ್ನು ಉದ್ಯೋಗವನ್ನಾಗಿ ಪರಿವರ್ತಿಸಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ನೂತನ ಸದಸ್ಯರಿಗೆ ಪದಗ್ರಹಣ ಮಾಡಿದರು. ಸಂಘದ ಅಧ್ಯಕ್ಷೆ ವೈಶಾಲಿ ಹೆಗ್ಡೆ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ವಿಭಾಗದ ಸಂಯೋಜಕರಾದ ಡಾ. ಆಡ್ರಿ ಪಿಂಟೋ, ಉಪನ್ಯಾಸಕರಾದ ರಶ್ಮಿ ,ಮೇಘಾ ಮತ್ತು ಸಾರ್ಥಕ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರುಕ್ಸಾನ ಸ್ವಾಗತಿಸಿದರು. ಶೀಬಾ ವಂದಿಸಿದರು ಹಾಗೂ ಜೆಮ್ಶೆರಾ ಸುಲ್ತಾನ ನಿರೂಪಿಸಿದರು.

Leave a Reply

Your email address will not be published. Required fields are marked *

3 + eleven =