ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2016ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನ. 18ರಿಂದ 20ರ ವರೆಗೆ ಮೂಡಬಿದಿರೆ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ರತ್ನಾಕರವರ್ಣಿ ವೇದಿಕೆಯಲ್ಲಿ ವಿಜೃಂಭಣೆಯಿಂದ ಉದ್ಘಾಟನೆ ಹಾಗೂ ಪ್ರಮುಖ ಕಾರ್ಯಕ್ರಮಗಳು ಜರುಗಿದರೆ, ಉಳಿದ ಸಮನಾಂತರ ವೇದಿಕೆಗಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಕರ್ನಾಟಕದ ನಾಳೆಗಳು ಎಂಬ ಪರಿಕಲ್ಪನೆಯಲ್ಲಿ ಈ ಭಾರಿಯ ನುಡಿಸಿರಿ ಜರುಗಲಿದೆ.
ಆಳ್ವಾಸ್ ನುಡಿಸಿರಿಗೆ ಕ್ಷಣಗಣನೆ. ಕಳೆಗಟ್ಟಿದ ವಿದ್ಯಾಗಿರಿ ಆವರಣ
