ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ.50 ರಷ್ಟು ಸಹಾಯಧನದೊಂದಿಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆಯನ್ನು ಮುಂದುವರಿಸಲಾಗಿದೆ.
ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000 ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ ಖರೀದಿಸಲು ಶೇ. 50 ರಷ್ಟು ಸಹಾಯಧನ ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ರಜತಾದ್ರಿ, ಮಣಿಪಾಲ, ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.