ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜುಲೈ 2022ನೇ ಅಧಿವೇಶನಕ್ಕಾಗಿ ಡೆಹರಾಡೂನಲ್ಲಿರುವ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ದಿ. ಡಿ. 18ರಂದು ನಡೆಸಲಾಗುವುದು. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿ. 1-7-2-2022ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ ( ಅಂದರೆ ದಿ. 02-07-2009 ರಿಂದ 1-1-2011 ರೊಳಗೆ ಜನಿಸಿರುವ) ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

Call us

Call us

ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600 ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ. 555 ಆನ್‌ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಟೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪತ್ರಿಕೆಗಳನ್ನು ಸಹ ಪಡೆಯಬಹುದು.

Call us

Call us

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಗಳನ್ನು ದ್ವಿಪ್ರತಿಯಲ್ಲಿ ನ.15ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ. ಎಮ್. ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ. ಎಮ್. ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

15 + nine =