ಇಂದಿರಾ ಗಾಂಧಿ ಆದರ್ಶಗಳು ಇಂದಿಗೂ ಪ್ರಸ್ತುತ: ಮದನ್ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದೇಶದ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಿ, ಪ್ರಾಣವನ್ನೇ ಅರ್ಪಿಸಿದ ಇಂದಿರಾ ಗಾಂಧಿ ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಇಂದಿರಾಗಾಂಧಿಯವರ ೧೦೨ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿ, ಶ್ರೀಮತಿ ಇಂದಿರಾ ಗಾಂಧಿ ದೇಶವನ್ನು ಬಲಿಷ್ಟಗೊಳಿಸಿ, ಭಾರತದ ಕೀರ್ತಿಯನ್ನು ವಿಶ್ವಕ್ಕೆ ಪಸರಿಸಿದ ಧೀಮಂತ ಮಹಿಳೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಮಾಜಿ ಬ್ಲಾಕ್ ಅಧ್ಯಕ್ಷ ವಾಸುದೇವ ಯಡಿಯಾಳ, ಪದಾಧಿಕಾರಿಗಳಾದ ಪಿ.ಎಲ್.ಜೋಸ್, ಮೋಹನ ಪೂಜಾರಿ, ನರಸಿಂಹ ದೇವಾಡಿಗ, ನಾಗರಾಜ್ ಗಾಣಿಗ, ಮಂಜುನಾಥ ಪೂಜಾರಿ ತಗ್ಗರ್ಸೆ, ಮಾಣಿಕ್ಯ ಹೋಬಳಿದಾರ್, ತಾಲೂಕು ಪಂಚಾಯತ್ ಸದಸ್ಯರುಗಳಾದ ಪ್ರಮೀಳಾ ದೇವಾಡಿಗ, ಜಗದೀಶ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

three + eight =