ಉಡುಪಿ: ಕಮ್ಮಟ ನಡೆಸಲು ಅರ್ಜಿ – ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಮಟ್ಟದ ಮೂರು ದಿನಗಳ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಕಮ್ಮಟ ಹಾಗೂ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟಗಳನ್ನು ನಡೆಸಲು ಉದ್ದೇಶಿಸಿದ್ದು, ಈ ನಾಲ್ಕು ಕಮ್ಮಟಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದ್ದು, ಪ್ರತಿ ವಿಭಾಗದ ಕಮ್ಮಟಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು

ಆಸಕ್ತರು ಅರ್ಜಿ ನಮೂನೆ ಹಾಗೂ ವಿವರಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ http://karnatakasahithyaacademy.org ಯಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

sixteen − fifteen =