ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶನಿವಾರ 215 ಪಾಸಿಟಿವ್, 1 ಕೋವಿಡ್ ಸಾವು

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೆ.19ರ ಶನಿವಾರ 215 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 50, ಉಡುಪಿ ತಾಲೂಕಿನ 121 ಹಾಗೂ ಕಾರ್ಕಳ ತಾಲೂಕಿನ 35 ಮಂದಿಗೆ ಪಾಸಿಟಿವ್ ಬಂದಿದೆ. 9 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

Call us

ಒಟ್ಟು ಪ್ರಕರಣಗಳಲ್ಲಿ 112 ಸಿಂಥಮೇಟಿವ್ ಹಾಗೂ 103 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 98, ILI 68, ಸಾರಿ 3 ಪ್ರಕರಣವಿದ್ದು, 45 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಹೊರ ಜಿಲ್ಲೆಯಿಂದ ಬಂದಿದ್ದಾರೆ.

ಇಂದು 82 ಮಂದಿ ಆಸ್ಪತ್ರೆಯಿಂದ ಹಾಗೂ 229 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 52 ವರ್ಷದ ಪುರುಷ ಮೃತಪಟ್ಟಿದ್ದಾರೆ.

858 ನೆಗೆಟಿವ್:
ಈ ತನಕ ಒಟ್ಟು 93528 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 78240 ನೆಗೆಟಿವ್, 15098 ಪಾಸಿಟಿವ್ ಬಂದಿದ್ದು, 190 ಮಂದಿಯ ವರದಿ ಬರುವುದು ಬಾಕಿ ಇದೆ.

1,337 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 15098 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 13621 ಮಂದಿ ಬಿಡುಗಡೆಯಾಗಿದ್ದು, ಒಟ್ಟು 1337 ಸಕ್ರಿಯ ಪ್ರಕರಣಗಳಲ್ಲಿ 770 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 567 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 140 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

7 + ten =