ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶನಿವಾರ 136 ಪಾಸಿಟಿವ್, 716 ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.01ರ ಶನಿವಾರ 136 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಈ ಪೈಕಿ ಕುಂದಾಪುರ ತಾಲೂಕಿನ 37, ಉಡುಪಿ ತಾಲೂಕಿನ 65 ಹಾಗೂ ಕಾರ್ಕಳ ತಾಲೂಕಿನ 33 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 70 ಪುರುಷರು, 66 ಮಹಿಳೆಯರು ಸೇರಿದ್ದಾರೆ.

716 ನೆಗೆಟಿವ್:
ಈ ತನಕ ಒಟ್ಟು 32,401 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 27,463 ನೆಗೆಟಿವ್, 4,492 ಪಾಸಿಟಿವ್ ಬಂದಿದ್ದು, 446 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 716 ನೆಗೆಟಿವ್, 136 ಪಾಸಿಟಿವ್ ಬಂದಿದೆ. ಒಟ್ಟು 1,316 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.  ಇಂದು 100 ಮಂದಿ ಬಿಡುಗಡೆಗೊಂಡಿದ್ದಾರೆ.

1,811 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 4,492 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,646 ಮಂದಿ ಬಿಡುಗಡೆಯಾಗಿದ್ದು, 1,811 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 35 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

twelve + 18 =