ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶುಕ್ರವಾರ 168 ಪಾಸಿಟಿವ್, 2 ಕೋವಿಡ್ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೆ.11ರ ಶುಕ್ರವಾರ 168 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 44, ಉಡುಪಿ ತಾಲೂಕಿನ 96 ಹಾಗೂ ಕಾರ್ಕಳ ತಾಲೂಕಿನ 26 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ 96 ಸಿಂಥಮೇಟಿವ್ ಹಾಗೂ 72 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 107, ILI 49, ಸಾರಿ 1 ಪ್ರಕರಣವಿದ್ದು, 11 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ.

ಇಂದು 63 ಮಂದಿ ಆಸ್ಪತ್ರೆಯಿಂದ ಹಾಗೂ 169 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರದ 73 ವರ್ಷದ ವೃದ್ಧ, ಉಡುಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದಾವಣಗೆರೆ ಜಿಲ್ಲೆಯ 60 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ.

1320 ನೆಗೆಟಿವ್:
ಈ ತನಕ ಒಟ್ಟು 82948 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 68795 ನೆಗೆಟಿವ್, 13743 ಪಾಸಿಟಿವ್ ಬಂದಿದ್ದು, 410 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1320 ನೆಗೆಟಿವ್, 168 ಪಾಸಿಟಿವ್ ಬಂದಿದೆ.

1,831 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 13743 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 11784 ಮಂದಿ ಬಿಡುಗಡೆಯಾಗಿದ್ದು, ಒಟ್ಟು 1831 ಸಕ್ರಿಯ ಪ್ರಕರಣಗಳಲ್ಲಿ 834 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 997 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 128 ಮಂದಿ ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *

18 − 15 =