ಉಡುಪಿ ಜಿಲ್ಲೆಯ ಜನತೆಯ ಪ್ರೀತಿ, ಆಶೀರ್ವಾದ ಎಂದಿಗೂ ಮರೆಯಲಾರೆ: ಜಿ. ಜಗದೀಶ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

Call us

Click Here

Click here

Click Here

Call us

Visit Now

Click here

ಅವರು ರಜತಾದ್ರಿಯ ಇಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಹೆಚ್ಚಿನ ಅವಧಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಮೀಸಲಿಡಲಾಯಿತು ಆದ್ದರಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಲಿಲ್ಲ ಎಂಬ ಕೊರಗು ಇದೆ, ಆದರೆ ಕೋವಿಡ್ ನಿಂದ ಜಿಲ್ಲೆಯಲ್ಲಿ ಹೆಚ್ಚು ಸಾವುಗಳು ಸಂಭವಿಸದAತೆ ಅಗತ್ಯ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿAದ, ಸೋಂಕು ಹೆಚಿದ್ದರೂ ಅತೀ ಕಡಿಮೆ ಸಾವು ಸಂಭವಿಸಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಜಿಲ್ಲೆಗೆ ದೊರೆತಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸೋಧ್ಯಮವನ್ನು ಅಭಿವೃಧ್ದಿಪಡಿಸುವ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ,ಕಂದಾಯ ಸೇವೆಗಳನ್ನು ಒದಗಿಸುವಲ್ಲಿ ಜಿಲ್ಲೆ ಇಂದಿಗೂ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ ಅಲ್ಲದೇ ಸಂಸದರು ಮತ್ತು ಶಾಸಕರ ಪ್ರದೇಶಾಭಿವೃಧ್ದಿ ಅನುದಾನವನ್ನು ಬಳಿಸಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಸಹ ಪ್ರಥಮ ಸ್ಥಾನದಲ್ಲಿದೆ ,ಕೋವಿಡ್ ಲಸಿಕೆ ನೀಡುವಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಸಮಯದಲ್ಲಿ ಎಲ್ಲಾ ಜನಪ್ರತಿನಿಧಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉತ್ತಮ ಸಹಕಾರ ನೀಡಿದ್ದಾರೆ ,ಮುಖ್ಯಮಂತ್ರಿಗಳ ಕಚೇರಿಯಲ್ಲಿ ಉಡುಪಿ ಜಿಲ್ಲೆಗೆ ಸಂಬAದಿಸಿದ ಯಾವುದೇ ಕಡತಗಳಿದ್ದಲ್ಲಿ ಆದಷ್ಠು ಶೀಘ್ರದಲ್ಲಿ ಅವುಗಳ ಮಂಜೂರಾತಿಗೆ ಪ್ರಯತ್ನಿಸಲಾಗುವುದು ಎಂದು ಜಿ.ಜಗದೀಶ್ ಹೇಳಿದರು.

Call us

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಮಾತನಾಡಿ, ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿದ್ದ ಮರಳು ವಿತರಣೆಯ ಸಮಸ್ಯೆಯನ್ನು ,ಅಧಿಕಾರಿ ಸ್ವೀಕರಿಸಿದ ಒಂದೂವರೆ ತಿಂಗಳಿನಲ್ಲಿಯೇ ಕಾನೂನು ಚೌಕಟ್ಟಿನೊಳಗೆ ನಿಯಮಾವಳಿಯನ್ವಯ ಪರಿಹಾರ ಮಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್,ಕೋವಿಡ್ ಸಮಸ್ಯೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿ, ಲಾಕ್ ಡೌನ್ ಅನುಷ್ಠಾನ, ಕ್ವಾರಂಟೈನ್ ನಿರ್ವಹಣೆ,ಜಿಲ್ಲೆಗೆ ಆಕ್ಸಿಜಿನ್ ಪೂರೈಕೆ ಮತ್ತು ಬೆಡ್ ಗಳ ಕೊರತೆಯಾಗದಂತೆ ಕ್ರಮ ಕೈಗೊಂಡಿದ್ದು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಉತ್ತಮ ಸಹಕಾರ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಪತ್ನಿ ಸೌಮ್ಯ, ಮಕ್ಕಳಾದ ಕು. ಅನುಷ್ಕಾ ಮತ್ತು ಕು. ಅಭಿಘ್ನ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ,ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕರಾವಳಿ ಕಾವಲು ಪಡೆ ಎಸ್ಪಿ ನಿಖಿಲ್, ಕುಂದಾಪುರ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗಿನ ಕಾರ್ಯನಿರ್ವಹಣೆಯ ಅನುಭವಗಳನ್ನು ಹಾಗೂ ಅವರ ಅತ್ಯುತ್ತಮ ಕಾರ್ಯ ವೈಖರಿಯ ಬಗ್ಗೆ ಮಾತನಾಡಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿದರು,ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

Leave a Reply

Your email address will not be published. Required fields are marked *

sixteen + eleven =