ಉಡುಪಿ ಜಿಲ್ಲೆ ಲೋಕಾಯುಕ್ತ ದೂರು ಸಲ್ಲಿಕೆಗೆ ಅವಕಾಶ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

Call us

Call us

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಮಾರ್ಚ್ 19 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬೈಂದೂರು ತಾಲೂಕು ಕಚೇರಿ, ಮಾರ್ಚ್ 20 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾಪು ತಾಲೂಕು ಕಚೇರಿ, ಮಾರ್ಚ್ 21 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರ, ಮಾರ್ಚ್ 23 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಮಾರ್ಚ್ 24 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಹೆಬ್ರಿ ತಾಲೂಕು ಕಚೇರಿ, ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬ್ರಹ್ಮಾವರ ತಾಲೂಕು ಕಚೇರಿ, ಮಾರ್ಚ್ 30 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಉಡುಪಿ ತಾಲೂಕು ಕಚೇರಿಯಲ್ಲಿ ದೂರು ಸ್ವೀಕರಿಸಲಾಗುವುದು.

ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2 ನ್ನು ಪಡೆದು ಅಫಿದವಿತ್ ಮಾಡಿಸಿ, ಸಂಬಂಧಪಟ್ಟ ದಾಖಲೆಗಳ ಪ್ರತಿಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ಘಟಕದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದಾರೆ.

Call us

Call us

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ ಸಂಖ್ಯೆ 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂರವಾಣಿ ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಉಡುಪಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

four + 6 =