ಉಡುಪಿ: ನಗರ ಸ್ಥಳೀಯ ಸಂಸ್ಥೆ ಚುನಾವಣೆ – ಮೀಸಲಾತಿ ಪ್ರಕಟ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಪತ್ರದಲ್ಲಿ ನಿರ್ದೇಶನ ನೀಡಲಾಗಿದ್ದು, ಈ ಕೆಳಕಂಡಂತೆ ಮೀಸಲಾತಿ ನಿಗಧಿ ಪಡಿಸಲಾಗಿರುತ್ತದೆ.

Call us

ಉಡುಪಿ ನಗರಸಭೆ : ಉಡುಪಿ ತಾಲೂಕಿನ ನಗರ ಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ.

ಕುಂದಾಪುರ ಪುರಸಭೆ : ಕುಂದಾಪುರ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಅಭ್ಯರ್ಥಿ.

Call us

ಕಾಪು ಪುರಸಭೆ : ಕಾಪು ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಅಭ್ಯರ್ಥಿ.

ಸಾಲಿಗ್ರಾಮ ಪಟ್ಟಣ ಪಂಚಾಯತ್: ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಅಭ್ಯರ್ಥಿ.

ಕಾರ್ಕಳ ಪುರಸಭೆ: ಕಾರ್ಕಳ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಅಭ್ಯರ್ಥಿ ನಿಗಧಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.  ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

eight − 2 =