ಉಡುಪಿ: ಬಿ.ಎಲ್.ಓಗಳ ಮೂಲಕ ಮನೆ ಮನೆ ತಪಾಸಣೆ – ಮಹೇಶ್ವರ ರಾವ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿನ ಪ್ರತಿ ಮನೆಗೆ ಭೇಟಿ ನೀಡಿ, ಶೀತ ಜ್ವರ ಇರುವವರ ವಿವರಗಳನ್ನು , ಬಿ.ಎಲ್.ಓ ಗಳ ಮೂಲಕ ಸಂಗ್ರಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ.

Click Here

Call us

Call us

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click here

Click Here

Call us

Visit Now

ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣ ಇಲ್ಲವಾಗಿದ್ದು, ಆದರೆ ಮುಂಜಾಗ್ರತೆಯಾಗಿ ಜಿಲ್ಲೆಯಾದ್ಯಂತ ಶೀತ ಜ್ವರ ಇರುವವರ ಕುರಿತು ಮನೆ ಮನೆಗಳ ವ್ಯಾಪಕ ತಪಾಸಣೆ ನಡೆಸುವಂತೆ ಸೂಚಿಸಿದ ಮಹೇಶ್ವರ ರಾವ್, ಈ ಕುರಿತಂತೆ ಜಿಲ್ಲೆಯ ಎಲ್ಲಾ ಬಿಎಲ್ ಓ ಗಳನ್ನು ಬಳಸಿಕೊಳ್ಳುವಂತೆ ಹಾಗೂ ತಪಾಸಣೆ ನಡೆಸುವ ಕುರಿತಂತೆ ಅವರಿಗೆ ಅಗತ್ಯ ತರಬೇತಿ ನೀಡುವಂತೆ ಹಾಗೂ ಮಾಹಿತಿ ದಾಖಲಿಸಲು ಅಗತ್ಯ ನಮೂನೆಯನ್ನು ಸಿದ್ದಪಡಿಸಿ ನೀಡಿ, ಮುಂದಿನ ೩ ದಿನದಲ್ಲಿ ಎಲ್ಲಾ ಬಿ.ಎಲ್.ಓ ಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಮುಗಿಸುವವಂತೆ ಸೂಚಿಸಿದರು.

ಜಿಲ್ಲೆಯ ಜನತೆ ತಮಗೆ ತೀವ್ರತರ ಜ್ವರ ಮತ್ತು ಶೀತ , ಉಸಿರಾಟದ ತೊಂದರೆಯಿದ್ದಲ್ಲಿ ಸ್ವಯಂ ಪ್ರೇರಿತವಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಅಗತ್ಯ ಚಿಕಿತ್ಸೆ ಪಡೆಯಬೇಕು , ಇದರಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಸಮಾಜದ ಇತರೆ ವ್ಯಕ್ತಿಗಳ ಆರೋಗ್ಯವನ್ನು ರಕ್ಷಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲೆಯಲ್ಲಿ ಕಳ್ಳಬಟ್ಟಿ ತಯಾರಿಕೆ, ಸರಬರಾಜು ಕುರಿತಂತೆ ಹೆಚ್ಚಿನ ನಿಗಾ ವಹಿಸುವಂತೆ ಮಹೇಶ್ವರ ರಾವ್ ಸೂಚಿಸಿದರು.

Call us

ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣ ಕಂಡು ಬಂದ ಕೂಡಲೆ, ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿದ್ವವರನ್ನು ಅತ್ಯಂತ ಕ್ಷಿಪ್ರವಾಗಿ ಗುರುತಿಸಿ, ಅವರನ್ನು ಕ್ವಾರಂಟೈನ್ ಮಾಡುವುದರ ಮೂಲಕ ರೋಗ ಹರಡುವುದನ್ನು ನಿಯಂತ್ರಿಸಲು, ಜಿಲ್ಲಾಡಳಿತ ಕೈಗೊಂಡ ಕ್ರಮಗಳಿಗೆ ಮಹೇಶ್ವರ ರಾವ್ ಮೆಚ್ಚುಗೆ ವ್ಯಕ್ತಪಡಿಸಿದರು.

ಉಡುಪಿಗೆ ಹೊರ ಜಿಲ್ಲೆಯಿಂದ ಪಾಸ್ ಪಡೆದು ಬರುವವರನ್ನು ಹೊಂ ಕ್ವಾರಂಟೈನ್ ನಲ್ಲಿ ಮತ್ತು ಅನಧಿಕೃತವಾಗಿ ಬರುವವರನ್ನು ಪೊಲೀಸ್ ಕ್ವಾರಂಟೈನ್ ನಲ್ಲಿಡಲಾಗುತ್ತಿದೆ, ಉತ್ತರ ಕನ್ನಡ ಜಿಲ್ಲೆಯಿಂದ ಮಣಿಪಾಲದಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಯಾವುದೇ ನಿರ್ಬಂದ ಇಲ್ಲ, ಕಳೆದ ೨೮ ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ , ಜಿಲ್ಲೆಯಲ್ಲಿ ವಿವಿಧ ಶೆಲ್ಟರ್ ರೂಂ ನಲ್ಲಿದ ೫೬೦ ವಲಸೆ ಕಾಮಿಕರನ್ನು ಶನಿವಾರ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲಾಗಿದೆ, ಉಳಿದವರನ್ನು ಸಹ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗಿನ ಕೊರೋನಾ ಪ್ರಕರಣUಳು, ಶಂಕಿತರ ತಪಾಸಣೆ ಮುಂತಾದ ಕುರಿತು ಸಮಗ್ರ ಮಾಹಿತಿಯನ್ನು , ಜಿಲ್ಲಾ ಕೊರೋನಾ ನಿಯಂತ್ರಣದ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ಸುದೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್ ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

16 + seven =