ಉಡುಪಿ: ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ವಲಯದಲ್ಲಿ ರೈತರ ಸಾಧನೆಯನ್ನು ಗುರುತಿಸಿ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಜಿಲ್ಲಾ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿ ಚಟುವಟಿಕೆಗಳಡಿ ಆಯ್ಕೆಯಾದ 10 ಮಂದಿ ರೈತರಿಗೆ ತಲಾ ರೂ.25000 ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಗೆ 5 ಮಂದಿ ರೈತರಿಗೆ ತಲಾ ರೂ.10000 ವನ್ನು ವಿತರಿಸಲಾಗುವುದು.

Call us

Call us

ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ ಹಾಗೂ ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ರೈತರು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.

ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಅರ್ಜಿ ನಮೂನೆಯನ್ನು ತಮ್ಮ ತಾಲ್ಲೂಕಿನ ಕೃಷಿ ನಿರ್ದೇಶಕರ ಕಛೇರಿ ಹಾಗೂ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

nineteen − 18 =