ಉದ್ಯೋಗ ಖಾತರಿ ಯೋಜನೆ ವಿಶೇಷ ಗ್ರಾಮಸಭೆ

Call us

Call us

Call us

Call us

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2015-16ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮಂಗಳವಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಿತು.

Call us

Click Here

Click here

Click Here

Call us

Visit Now

Click here

ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಪಂಚಾಯತ್‌ನ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಲಕ್ಷ್ಮೀನಾರಾಯಣ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ವರ್ಷದಲ್ಲಿ ಕನಿಷ್ಠ 100 ದಿನ ಉದ್ಯೋಗ ನೀಡುವ ದೃಷ್ಟಿಯಿಂದ ಆರಂಭಿಸಲಾಗಿರುವ ಈ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಆನರು ಈ ಯೋಜನೆಯಡಿ ಹೆಸರನ್ನು ನೊಂದಾಯಿಸಿಕೊಂಡು ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಯ ಮಾರ್ಗಸೂಚಿಯಂತೆ ಕಾಮಗಾರಿಯನ್ನು ನಿರ್ವಹಿಸಬಹುದು. ಈ ಯೋಜನೆಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದರು.

ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮಸಭೆಯ ನಡಾವಳಿಯಲ್ಲಿ ಕೆಲವೊಂದು ನಿರ್ಣಯಗಳನ್ನು ಬರೆದಿಲ್ಲ ಮತ್ತು ಕಳೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಗ್ರಾಪಂ ಸದಸ್ಯರನ್ನು ಅವಹೇಳನ ಮಾಡಿದ ಅಧಿಕಾರಿಗಳ ವಿರುದ್ಧ ಜರುಗಿಸಲಾದ ಕ್ರಮಗಳ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿ ಈ ಬಗ್ಗೆ ಕೂಲೇ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಆಗ್ರಹಿಸಿದರು. ಉದ್ಯೋಗ ಖಾತರಿ ಯೋಜನೆಯ ಕೂಲಿ ಮೊತ್ತವನ್ನು ಹೆಚ್ಚಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಶೌಚಾಲಯ ನಿರ್ಮಾಣದ ಪ್ರಗತಿ ಮತ್ತು ಬಾಕಿಯಿರುವ ಶೌಚಾಲಯ ಕಾಮಗಾರಿ ಬಗ್ಗೆ ಸಾರ್ವಜನಿಕರು ಮಾಹಿತಿ ಕೇಳಿದರು. ಜಾಗೃತ ಉಸ್ತುವಾರಿ ಸಮಿತಿಯನ್ನು ರಚನೆ ಮಾಡದಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಜಾಗೃತ ಉಸ್ತುವಾರಿ ಸಮಿತಿಯ ಕಾರ್ಯದ ಬಗ್ಗೆ ಸಭೆಗೆ ಮಾಹಿತಿ ನೀಡುವಂತೆ ಆಗ್ರಹಿಸಿದರು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಲೆಕ್ಕಪರಿಶೋಧಕ ಸುರೇಂದ್ರ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ ಡಿಸೋಜ ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ವಂದಿಸಿದರು.

Leave a Reply

Your email address will not be published. Required fields are marked *

eight + four =