ಉಪ್ಪುಂದ ಪೇಟೆ: ತ್ಯಾಜ್ಯ ರಾಶಿ, ತೆರವಿಗೆ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಪೇಟೆಯ ಸರ್ವೀಸ್ ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದಿದ್ದು, ಸರಿಯಾಗಿ ವಿಲೇವಾರಿ ಮಾಡದಿರುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಉಪ್ಪುಂದ ಪೇಟೆಯ ಮಾರ್ಕೆಟ್‌ನ ಒಂದು ಬದಿಯಲ್ಲಿ ಕಸ ಹಾಗೂ ತ್ಯಾಜ್ಯ ರಾಶಿ ಉಂಟಾಗಿದೆ. ಕಸಗಳ ರಾಶಿಯನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದೆ ಇರುವುದರಿಂದ ವಾಸನೆ ಬೀರುತ್ತಿದೆ. ಪ್ರತಿ ಮಂಗಳವಾರ ವಾರದ ಸಂತೆ ನಡೆಯುತ್ತಿದ್ದು ಈ ಸಂದರ್ಭ ಹಾಳಾದ ತರಕಾರಿ, ಹಣ್ಣು ಹಂಪಲುಗಳು, ಪ್ಲಾಸ್ಟಿಕ್ ಸೇರಿದಂತೆ ವಿವಿಧ ಬಗೆಯ ತ್ಯಾಜ್ಯಗಳನ್ನು ಇಲ್ಲಿ ತಂದು ಎಸೆಯಲಾಗುತ್ತಿದೆ.

ಮಳೆಯಿಂದಾಗಿ ತ್ಯಾಜ್ಯಗಳು ಕೊಳೆತು ಸುತ್ತಮುತ್ತಲಿನ ಪರಿಸರ ಮಾಲಿನ್ಯಗೊಳ್ಳುವ ಆತಂಕವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ನಿತ್ಯ ಸಾವಿರಾರು ಜನರು ಸಂಚರಿಸುವ ಪೇಟೆ ಹಾಗೂ ರಸ್ತೆಯ ಬದಿಯಲ್ಲಿನ ತ್ಯಾಜ್ಯಗಳನ್ನು ತೆರವುಗೊಳಿಸದೆ ಇರುವುದಕ್ಕೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯಾಡಿತ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ತೆರವುಗೊಳಿಸುವಂತೆ ಸಾರ್ವಜನಿಕರು ಸ್ಥಳೀಯಾಡಳಿತವನ್ನು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

twelve + 7 =