ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಲದ ಅಗತ್ಯಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ ಕ್ಷೇತ್ರ ಪ್ರೇಕ್ಷಣೀಯ ಸ್ಥಳವಾಗಲಿದೆ ಎಂದು ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.
ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕ್ಷೇತ್ರ ಪುರೋಹಿತರೊಂದಿಗೆ ಉಮೇಶ್ ತಂತ್ರಿ, ಮತ್ತು ಶ್ರೀಧರ್ ಪುರೋಹಿತ್ ಅವರ ಪೌರೋಹಿತ್ಯದಲ್ಲಿ ಸಂಪನ್ನವಾದ ರಂಗಪೂಜೆ, ದೀಪೋತ್ಸವದ ಅಂತ್ಯದಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೊಕ್ತೇಸರ ಮಂಜುನಾಥ ಆಚಾರ್ಯ, ಬಾಬು , ಮಾಜಿ ಪ್ರಧಾನ ಕಾರ್ಯದರ್ಶಿ ಸಂಜೀವ ಆಚಾರ್ಯ, ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರತಿಭಾ ವಿಜೇಂದ್ರ ಆಚಾರ್ಯ, ಬಾಲ ಕಲಾವಿದೆ ಶ್ರಾವ್ಯಾ ಮರವಂತೆ, ಮಾಗಣೆ ಮೊಕ್ತೇಸರ ರಮೇಶ ಆಚಾರ್ಯ, ರತ್ನಾಕರ ಆಚಾರ್ಯ, ಮಂಜುನಾಥ ಆಚಾರ್ಯ, ಸತೀಶ ಆಚಾರ್, ಸುರೇಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ನಿರೂಪಿಸಿದರು. ಜೀಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆಚಾರ್ಯ ಸ್ಮರಿಸಿದರು.
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ, ಗುತ್ತಿಗೆದಾರ ರಂಗನಕೆರೆ ಪ್ರವೀಣ್ ಆಚಾರ್ಯ, ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ಯ, ಮಾಗಣೆ ಮೊಕ್ತೇಸರರ ಪ್ರತಿನಿಧಿ ದಿವಾಕರ ಆಚಾರ್ಯ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಉದಯ ಆಚಾರ್ಯ, ಸೇವಾ ಸಮಿತಿ ಅಧ್ಯಕ್ಷ ನಾಗೇಂದ್ರ ಆಚಾರ್ಯ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ಜಲಜಾ ಚಂದ್ರಯ್ಯ ಆಚಾರ್ಯ, ಅಧ್ಯಕ್ಷೆ ಸುಶೀಲಾ ಚಂದ್ರಯ್ಯ ಆಚಾರ್ಯ, ಮಾಜಿ ಮೊಕ್ತೇಸರ ಯು. ಕೆ. ಸೀತಾರಾಮ ಆಚಾರ್ಯ, ಸುಧಾಕರ ಆಚಾರ್ಯ ಇದ್ದರು.
ಜತೆ ಕಾರ್ಯದರ್ಶಿ ಕರುಣಾಕರ ಆಚಾರ್ಯ ಸ್ವಾಗತಿಸಿದರು. ಮೊಕ್ತೇಸರ ಶ್ರೀಧರ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು. ನಾಗೇಂದ್ರ ಆಚಾರ್ಯ ವಂದಿಸಿದರು.