ಎಎಸ್ಪಿ ಹರಿರಾಂ ಶಂಕರ್ ಮಂಗಳೂರು ಡಿಸಿಪಿ ಆಗಿ ಒಒಡಿ ವರ್ಗ. ಕುಂದಾಪುರಕ್ಕೆ ಡಿವೈಎಸ್ಪಿ ಭರತ್ ರೆಡ್ಡಿ ಚಾರ್ಜ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅವರ 15 ದಿನಗಳ ರಜೆ ಹಿನ್ನೆಲೆ ಅವರ ಸ್ಥಾನಕ್ಕೆ ಓ.ಓ.ಡಿಯಾಗಿ ಕುಂದಾಪುರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರನ್ನು ನಿಯೋಜಿಸಲಾಗಿದೆ.

ಮಂಗಳೂರು ಸಿಟಿ ಡಿಸಿಪಿ ಅರುಣಾಂಗ್ಷು ಗಿರಿ ಅವರ ಕೋರಿಕೆಯಂತೆ ನ.18 ರಿಂದ ಡಿ.2 ರ ತನಕ ವೈಯಕ್ತಿಕ ಕಾರಣದ ಮೇರೆಗೆ 15 ದಿನಗಳ ಗಳಿಕೆ ರಜೆ ನೀಡಿದ್ದು ಆ ಸ್ಥಾನಕ್ಕೆ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ಅವರನ್ನು ನಿಯೋಜಿಸಲಾಗಿದೆ.

ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿಯವರು ಅಲ್ಲಿನ ಕರ್ತವ್ಯದ ಜೊತೆ ತಾತ್ಕಾಲಿಕ ನೆಲೆಯಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

4 × 2 =