ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಎನ್.ಟಿ.ಎಸ್.ಇ ಮತ್ತು ಎನ್.ಎಮ್.ಎಮ್.ಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳು ಶಾಲೆಗಳ ಮೂಲಕ ವೆಬ್ಸೈಟ್ https://sslc.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಟಿ.ಎಸ್.ಇ ಹಾಗೂ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಹರಿರುತ್ತಾರೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಾಲೂಕು ಹಂತದಲ್ಲಿ ವಿಶೇಷ ತರಬೇತಿಯನ್ನು ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.