ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು.
ಕೋವಿಡ್-19 ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಯವರ ಸೂಚನೆಯಂತೆ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿ ಹಾಗೂ ಶೌಚಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಸದಸ್ಯ ಬಿ. ರಾಘವೇಂದ್ರ ಪೈ, ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಸಿಬ್ಬಂದಿ ಶ್ರೀಧರ ಗಾಣಿಗ, ಪ್ರಭಾಕರ ಶೇರುಗಾರ್, ಗ್ರಾಪಂ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್, ಅನಿಲ್ ಮತ್ತಿತರರು ಉಪಸ್ಥಿತರಿದ್ದರು.