ಎಸ್.ಸಿ. ಎಸ್.ಪಿ ಹಾಗೂ ಟಿ.ಎಸ್.ಪಿ ಅನುಪಾತ ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನವನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

Call us

Call us

ಅವರು ತಮ್ಮ ಕಛೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ. ಜಾತಿ ಮತ್ತು ಪ. ಪಂಗಡ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ.ಜಾತಿ ಮತ್ತು ಪ.ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ವಿವಿಧ ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದರು.

Click here

Click Here

Call us

Call us

Visit Now

ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜನ ಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಹೆಚ್ಚು ಪ್ರಚಾರಪಡಿಸುವುದರ ಜೊತೆಗೆ ಸಹಾಯವಾಣಿಗಳನ್ನು ತೆರೆಯುವ ಮೂಲಕ ಯೋಜನೆಗಳ ಇತರೆ ಮಾಹಿತಿಯನ್ನು ನೀಡಬೇಕು ಎಂದ ಅವರು, ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಮಾಹಿತಿಯ ಮಡಿಕೆ ಪತ್ರಗಳನ್ನು ತಯಾರಿಸಿ ಗ್ರಾ.ಪಂ ಸದಸ್ಯರು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು ಎಂದರು.

ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದಾಗ ಅಗತ್ಯವಿರುವ ದಾಖಲೆಗಳನ್ನು ಮಾತ್ರ ಪಡೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಈ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗಳು ಸಮನ್ವಯ ಹೊಂದಿ ಕಾರ್ಯನಿರ್ವಹಿಸಬೇಕು, ಯಾವುದೇ ರೀತಿಯ ಸಮಸ್ಯೆಗಳು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಉದ್ಭವಿಸಿದಾಗ ಅವುಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಶೀಘ್ರದಲ್ಲಿಯೇ ಬಗೆ ಹರಿಸಿ ಅನುಷ್ಟಾನಗೊಳಿಸಬೇಕು ಎಂದರು.

Call us

ಪ್ರತೀ ಇಲಾಖೆಗಳಲ್ಲಿಯೂ ಯೋಜನೆಗಳ ಅನುಷ್ಠಾನ ಕುರಿತು ಸಾರ್ವಜನಿಕರ ಕುಂದು-ಕೊರತೆಗಳನ್ನು ಬಗೆ ಹರಿಸಲು ನೊಡೆಲ್ ಅಧಿಕಾರಿಗಳನ್ನು ನೇಮಕ ಮಾಡುವುದರೊಂದಿಗೆ, ಬಂದAತಹ ಅಹವಾಲುಗಳನ್ನು ಆಗಿಂದಾಗೆ ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿದರು.

ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ನಾವೆಲ್ಲರೂ ಗಮನ ಹರಿಸಬೇಕಾಗುತ್ತದೆ. ಆಯ್ದ ಹಾಸ್ಟೆಲ್ಗಳಿಗೆ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸುವುದರೊಂದಿಗೆ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಒತ್ತು ನೀಡುವಂತೆ ಉತ್ತೇಜಿಸಬೇಕು ಎಂದರು.

ಪ.ಜಾತಿ/ಪ.ಪಂಗಡದಲ್ಲಿ ವಾಸಿಸುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದ ಅವರು ಗ್ರಾ.ಪಂ ಮಟ್ಟದಲ್ಲಿಯೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳ ಸಾಮಾನ್ಯ ಯೋಜನೆಗಳಲ್ಲಿ ಪ.ಜಾತಿ/ಪ.ಪಂಗಡದ ಜನಸಂಖ್ಯೆಯಲ್ಲಿ ಬಾಕಿ ಉಳಿದ ಫಲಾನುಭವಿಗಳ ಮಾಹಿತಿಯನ್ನು ಹೊಂದುವುದರೊಂದಿಗೆ, ಅರ್ಹರಿರುವ ಪ್ರತಿಯೊಬ್ಬರಿಗೂ ಯೋಜನೆಗಳ ಸೌಲಭ್ಯವನ್ನು ತಲುಪಿಸುವ ಕಾರ್ಯ ಮಾಡಬೇಕು ಎಂದರು.

ಕಾಲೋನಿಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇರೆಗೆ ಕೈಗೊಂಡು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದ ಅವರು, ಗಂಗಾಕಲ್ಯಾಣ ಯೋಜನೆಯ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ತೀಕರಣಗೊಳಿಸುವ ಕಾರ್ಯ ಸಹ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ಜಿಲ್ಲಾ ಮಟ್ಟದ ಅನುಷ್ಟಾನಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

fifteen − six =