ಏ.14-16 ಬಿಜೂರು ಶ್ರೀ ನಂದಿಕೇಶ್ವರ ದೈವಸ್ಥಾನ ವಾರ್ಷಿಕೋತ್ಸವ, ಏಕಾಹ ಅಖಂಡ ಭಜನೆ.

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಪುರಾತನ ಪ್ರಸಿದ್ಧ ಬಿಜೂರು ಶ್ರೀ ನಂದಿಕೇಶ್ವರ ದೈವಸ್ಥಾನ ಮೂರ‍್ಗೋಳಿಹಕ್ಲು ಇಲ್ಲಿ ಏ.14 ರಿಂದ 16 ರ ವರೆಗೆ ನಡೆಯುವ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ವಾರ್ಷಿಕೋತ್ಸವದ ಅಂಗವಾಗಿ ಚಪ್ಪರ ಮೂಹೂರ್ತ ಕಾರ್ಯಕ್ರಮ ನಡೆಯಿತು.

Call us

Call us

ಉಪ್ಪುಂದ ಸಂದೇಶ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜೆ ಕಾರ್ಯ ನೆರವೇರಿತು.

ಏ.14 ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಏ.15 ರಂದು ಬೆಳಗ್ಗೆ ಗಂಟೆ 11.15 ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.15 ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ.

Call us

Call us

ಮಧ್ಯಾಹ್ನ 3 ಗಂಟೆಗೆ ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ನಡೆಯಲಿದ್ದು, ರಾತ್ರಿ 8 ಗಂಟೆಗೆ ಕೆಂಡ ಸೇವೆ ಹಾಗೂ ಮಹಾಮಂಗಳಾರತಿ ನಡೆಯಲಿರುವುದು. ಮೂರು ದಿನದ ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ನಡೆಯಲಿದೆ.

ಈ ಸಂದರ್ಭ ದೈವಸ್ಥಾನದ ಅಧ್ಯಕ್ಷ ಕೃಷ್ಣಮೂರ್ತಿ ದೇವಾಡಿಗ ಮತ್ತು ಸಮಿತಿ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

17 − two =