ಕರ್ನಾಟಕವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: 2018 & 2019 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಪಡೆದ ಹಾಗೂ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ.

Call us

ಒಲಂಪಿಕ್ ಗೇಮ್ಸ್, ಏಷಿಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ವರ್ಲ್ಡ್ ಕಪ್/ ವರ್ಲ್ಡ್ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಹಾಗೂ ನ್ಯಾಷನಲ್ ಗೇಮ್ಸ್, ನ್ಯಾಷನಲ್ ಚಾಂಪಿಯನ್‌ಶಿಪ್, ಜೂನಿಯರ್ ನ್ಯಾಷನಲ್ಸ್ ಹಾಗೂ ಸಬ್ ಜೂನಿಯರ್ ನ್ಯಾಷನಲ್ಸ್‌ಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಸದರಿ ನಗದು ಬಹುಮಾನಕ್ಕೆ ಅರ್ಹರಾಗಿರುತ್ತಾರೆ.

ಅರ್ಹ ಕ್ರೀಡಾಪಟುಗಳು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ (ದೂರವಾಣಿ ಸಂಖ್ಯೆ: 0820-2521324, 9480886467) ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಡೀಕೃತ ದಾಖಲೆಗಳೊಂದಿಗೆ ಏಪ್ರಿಲ್ 15 ರ ಒಳಗೆ ಹಿಂತಿರುಗಿಸಬೇಕು. ನಂತರ ಬಮರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

four × 2 =