ಕಲಾವಿದರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತುತ ರಾಜ್ಯಾದ್ಯಂತ ಕೋವಿಡ್-19 2ನೇ ಅಲೆಯ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3,000 ಗಳ ಆರ್ಥಿಕ ನೆರವನ್ನು ಮಾನ್ಯ ಮುಖ್ಯಮಂತ್ರಿಗಳು ಮೇ 19 ರಂದು ಘೋಷಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ತಲಾ ರೂ.3,000 ಗಳ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದೆ.

Click here

Click Here

Call us

Call us

Visit Now

Call us

Call us

ಈ ಯೋಜನೆಯಡಿ ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಪ್ರಕಾರದ ಕಲಾವಿದರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕಲಾವಿದರು ವೃತ್ತಿನಿರತರಾಗಿದ್ದು, 35 ವರ್ಷ ಮೇಲ್ಪಟ್ಟವರಾಗಿರಬೇಕು ಹಾಗೂ ಕನಿಷ್ಠ 10 ವರ್ಷಗಳ ಕಲಾಸೇವೆ ಮಾಡಿರಬೇಕು. (ಕಲಾವಿದರು ಕಲಾಸೇವೆ ಮಾಡಿರುವಕನಿಷ್ಠ ಒಂದು ಪೋಟೋ ಲಗತ್ತಿಸುವುದು).ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು ಹಾಗೂ ಯಾವುದೇ ಸರ್ಕಾರಿ ನೌಕರರಾಗಿರಬಾರದು (ರಾಜ್ಯ/ ಕೇಂದ್ರ/ ನಿಗಮ ಮಂಡಳಿ/ ಸರ್ಕಾರಿಅನುದಾನಿತ ಸಂಸ್ಥೆಗಳು/ ಅರೆ ಸರ್ಕಾರಿ ಸಂಸ್ಥೆಗಳು). 2020-21ನೇ ಸಾಲಿನ ಸಾಮಾನ್ಯ /ವಿಶೇಷಘಟಕ/ ಗಿರಿಜನಉಪಯೋಜನೆಯಡಿ ಸಾಂಸ್ಕೃತಿಕ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯ ಪಡೆದವರು / ವಾದ್ಯ ಪರಿಕರ/ ವೇಷಭೂಷಣ ಖರೀದಿ/ ಶಿಲ್ಪಕಲೆ/ ಚಿತ್ರಕಲಾ ಪ್ರದರ್ಶನಕ್ಕೆಧನಸಹಾಯ ಪಡೆದವರು ಸದರಿಯೋಜನೆಯಡಿ ಅರ್ಜಿ ಸಲ್ಲಿಸುವಂತಿಲ್ಲ.

ಈ ವ್ಯಾಪ್ತಿಗೆ ಒಳಪಡುವ ಕಲಾವಿದರುತಮ್ಮ ಹೆಸರು, ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ (ಆಧಾರ್ಕಾರ್ಡ್ ಲಗತ್ತಿಸಿ), ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ (ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟ ಲಗತ್ತಿಸಿ) ವಿವರಗಳನ್ನೊಳಗೊಂಡ ಅರ್ಜಿಯನ್ನು ಜಿಲ್ಲೆಯಲ್ಲಿರುವ ಎಲ್ಲಾ ನಾಗರೀಕ ಸೇವಾ ಕೇಂದ್ರಗಳು ಅಥವಾ ಕಂಪ್ಯೂಟರ್ / ಮೊಬೈಲ್ ಮೂಲಕ ಆನ್ಲೈನ್ ನಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿಯೇ ಕಡ್ಡಾಯವಾಗಿ ಭರ್ತಿ ಮಾಡಿ ಸಲ್ಲಿಸುವುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್ 5 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಗತಿನಗರ, ಮಣಿಪಾಲ ದೂರವಾಣಿ ಸಂಖ್ಯೆ: 0820-2986168 ಮೊಬೈಲ್ ಸಂಖ್ಯೆ: 9945731062/8217794569 ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

11 + 19 =