ಕಲಾ ಮಾಧ್ಯಮದ ಮೂಲಕ ವಿಷಯವನ್ನು ಸರಳವಾಗಿ ಅರ್ಥೈಸಿಕೊಳ್ಳಬಹುದಾಗಿದೆ: ನಾಗೇಶ್ ನಾಯಕ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜು.19:
ಉಪ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಕಲಾಯಾತ್ರೆ 2022 ಉದ್ಘಾಟನಾ ಸಮಾರಂಭ ಜರುಗಿತು.

Call us

Call us

Visit Now

ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಮಾತನಾಡಿ, ಕಲಾ ಮಾಧ್ಯಮ ವಿಷಯವನ್ನು ಸರಳವಾಗಿ ಅರ್ಥಪೂರ್ಣವಾಗಿ ತಿಳಿಸುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಶಿಕ್ಷಕರು ತೊಡಗಿಸಿಕೊಂಡು ವಿಷಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ ಎಂದು ಹೇಳಿದರು.

Click here

Call us

Call us

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಕರುಣಾಕರ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ವಲಯ್ಯಾಧ್ಯಕ್ಷ ಶೇಖರ ಪೂಜಾರಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜಯ ದೇವಾಡಿಗ, ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರನಾರಾಯಣ ಬಿಲ್ಲವ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ ಮೌನೇಶ್ ಕಲ್ಲಡ್ಕ, ಸಂತೋಷ್ ಹಾಸನ, ಜಲಜಾಕ್ಷಿ ಸುಳ್ಯ ತರಬೇತಿ ನೀಡಿದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ಧನ್ ದೇವಾಡಿಗ ಸರ್ವರನ್ನು ಸ್ವಾಗತಿಸಿದರು. ಇಂಡಿಯಾ ಫೌಂಡೇಶನ್ ಫಾರ್ ಡಿ ಆರ್ಟ್ಸ್ ಇದರ ಕಾರ್ಯಕ್ರಮ ಅಧಿಕಾರಿ ರಾಧಿಕಾ ಪ್ರಾಸ್ತವಿಕ ಮಾತುಗಳಾಡಿದರು. ಸಹ ಶಿಕ್ಷಕಿ ನಾಗರತ್ನ ಯು. ಧನ್ಯವಾದ ಸಲ್ಲಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ಸಂಯೋಜಿಸಿದ್ದರು.

Leave a Reply

Your email address will not be published. Required fields are marked *

fifteen − 10 =