ಎ.15: ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್: 12ನೇ ವಾರ್ಷಿಕೋತ್ಸವ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಳವಾಡಿ ಶ್ರೀ ಮೂಕಾಂಬಿಕಾ ಯೂತ್ ಕ್ಲಬ್ ರಿ. ಇದರ 12ನೇ ವರ್ಷದ ವಾರ್ಷಿಕೋತ್ಸವ ಎಪ್ರಿಲ್ 15 ಶನಿವಾರ ಕಳವಾಡಿಯಲ್ಲಿ ಅದ್ದೂರಿಯಾಗಿ ಜರುಗಲಿದ್ದು, ಸಕಲ ಸಿದ್ಧತೆಗಳು ನಡೆದಿವೆ.

Call us

Call us

Call us

ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ವೇದಮೂರ್ತಿ ರಾಮಚಂದ್ರ ಅನಂತ ಭಟ್ಟರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಜರುಗಲಿದೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಮಾರಿಕಾಂಬ ಯೂತ್ ಕ್ಲಬ್ ಸದಸ್ಯರಿಂದ ಆಕರ್ಷಕ ನೃತ್ಯ ಪ್ರದರ್ಶನ, ಅಂಗನವಾಡಿ ಪುಟಾಣಿಗಳಿಂದ ನೃತ್ಯ; ರಾತ್ರಿ, ನರ್ತಕಿ ಉಡುಪಿ ಕಲಾವಿದರಿಂದ ಭರತನಾಟ್ಯ ಹಾಗೂ ನೃತ್ಯ ರೂಪಕ ಬಳಿಕ ರೂಪಕಲಾ ಕುಂದಾಪುರ ತಂಡದಿಂದ ಪಾಪಾ ಪಾಂಡು ನಾಟಕ ಪ್ರದರ್ಶನಗೊಳ್ಳಲಿದೆ.

Leave a Reply

Your email address will not be published. Required fields are marked *

twenty − 17 =