ಕಳಿಹಿತ್ಲು ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ ಪತ್ತೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣ ಸಮುದ್ರ ತೀರದಲ್ಲಿ ಕಂಡುಬಂದಿದೆ.

Call us

Call us

ಈ ಬಗ್ಗೆ ಸ್ಥಳೀಯರು ಕರಾವಳಿ ಕಾವಲು ಪಡೆಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಸಿಬ್ಬಂದಿ ವಸ್ತುವನ್ನು ವಶಕ್ಕೆ ಪಡೆದುಕೊಂಡರು. ಕರಾವಳಿ ಕಾವಲುಪಡೆಯ ಎಸ್ಪಿ ಆರ್. ಚೇತನ್ ಈ ಬಗ್ಗೆ ಮಾಹಿತಿ ನೀಡಿ ‘ಮೇಲ್ನೋಟಕ್ಕೆ ಹಡಗಿನ ದಿಕ್ಕು ಸೂಚಕ ವಸ್ತುವಿನಂತೆ ಕಾಣುತ್ತಿದೆ. ಸಾಮಾನ್ಯವಾಗಿ ಬಂದರಿನ ಸಮೀಪದಲ್ಲಿ ಇಂತಹ ಉಪಕರಣವನ್ನು ಅಳವಡಿಸಲಾಗುತ್ತದೆ. ಹಡಗುಗಳು ಬಂದರು ತಲುಪಲು ಈ ಉಪಕರಣಗಳು ಸಹಾಯ ಮಾಡುತ್ತವೆ ಎಂದಿದ್ದಾರೆ.

Leave a Reply

Your email address will not be published. Required fields are marked *

twenty + 14 =