ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಗೆಲುವು ನಿಶ್ಚಿತ: ಶಾಸಕ ಗೋಪಾಲ ಪೂಜಾರಿ

Call us

Call us

[quote font_size=”16″ bgcolor=”#ffffff” arrow=”yes” align=”right”]ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರ ಬೆಂಬಲ:
ಪ್ರತಾಪಚಂದ್ರ ಶೆಟ್ಟಿ ಅವರ ಕುರಿತು ಕಾಂಗ್ರೆಸ್ ಬೆಂಬಲಿತ ಮತದಾರರಿಂದ ಪೂರಕವಾದ ಅಭಿಪ್ರಾಯ ಮೂಡಿಬರುತ್ತಿದೆ. ಪರಿಷತ್ ಚುನಾವಣೆಯಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆಂಬ ವಿಶ್ವಾಸವಿದೆ. ನಮ್ಮ ಮತದಾರರಿಗೆ ಚುನಾವಣೆಯನ್ನು ಮತಹಾಕಲು ಕುರಿತಂತೆ ತರಬೇತಿ ನೀಡಲಾಗಿದೆ – ಆಸ್ಕರ್ ಫೆರ್ನಾಂಡಿಸ್, ರಾಜ್ಯಸಭಾ ಸಂಸದರು.[/quote]

Call us

Call us

Call us

ಬೈಂದೂರು: ಕಾಂಗ್ರೆಸ್ ಪಕ್ಷ ನಾಯಕರು ಮತ್ತು ಕಾರ್ಯಕರ್ತರು ವಿಧಾನ ಪರಿಷತ್ ಚುನಾವಣೆಯನ್ನು ಗಭೀರವಾಗಿ ಪರಿಗಣಿಸಿ ಪೂರ್ವ ಸಿದ್ಧತೆ ಮಾಡಿಕೊಂಡಿದ್ದಾರೆ. ನಮ್ಮ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಪ್ರಚಂಡ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

Call us

Call us

ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಚುನಾವಣೆ ಹೇಗಾದರು ಮಾಡಿ ಗೆಲ್ಲಬೇಕು ಎನ್ನುವ ಕಾರಣಕ್ಕೆ ಬಂಡಾಯ ಅಭ್ಯರ್ಥಿಗಳು ಸುಳ್ಳು ಪ್ರಚಾರ ಮಾಡಿ ಮತದಾರರನ್ನು ತಮ್ಮತ್ತ ಸೆಳೆಯುವ ಕಾರ್ಯ ನಡೆಸುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಒಬ್ಬ ಪರಿಷತ್ ಸದಸ್ಯನಿಂದ ಗ್ರಾಮ ಪಂಚಾಯತ್ ಮಸೂದೆಗಳಿಗೆ ತಿದ್ದುಪಡಿ ತರಲು ಸಾಧ್ಯವಿಲ್ಲ. ಆ ಕೆಲಸವನ್ನು ಸರಕಾರ ಮಾಡುತ್ತದೆ ಎಂದರು.

ಸಂಸದ ಆಸ್ಕರ್ ಫೆರ್ನಾಂಡಿಸ್ ಕಾಂಗ್ರೆಸ್ ಮುಖಂಡರಾದ ಎಸ್. ರಾಜು ಪೂಜಾರಿ, ಎಂ.ಎ. ಗಪೂರ್, ರಾಮ ಶೇರುಗಾರ್, ಬೈಂದೂರು ಬ್ಲಾಕ್ ಕಾರ್ಯದರ್ಶಿ ನಾಗರಾಜ್ ಗಾಣಿಗ, ವೀಕ್ಷಕರಾದ ಬಿ. ಹಿರಿಯಣ್ಣ, ದೇವಕಿ ಸಣ್ಣಯ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

5 × 2 =