ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಜ್ಞಾನಪೀಠ ಪುರಸ್ಕೃತ ಡಾ ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗಮಂದಿರ, ಗ್ರಂಥಾಲಯ, ಅಂಗನವಾಡಿ ವೀಕ್ಷಿಸಿದರು.
ಕಾರಂತರು ಸಾಹಿತ್ಯ ಲೋಕದಲ್ಲಿ ನೀಡಿದ ಕೊಡುಗೆಯನ್ನು ಸ್ಮರಿಸಿಕೊಂಡರು, ಅಲ್ಲದೇ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕೋಟತಟ್ಟು, ಕೋಟ ಗ್ರಾಮ ಪಂಚಾಯತ್ ಗ್ರಂಥಾಲಯದ ಸಿಬ್ಬಂದಿಗಳಾದ ಶೈಲಜ ಕೆ.ಎನ್, ಜ್ಯೋತಿ ಅವರು ಗೌರವಧನ ಹೆಚ್ಚಿಸುವಂತೆ ವಿನಂತಿಸಿಕೊಂಡರು ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ದ.ಕ ಉಸ್ತುವಾರಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ , ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಬಿ.ಎನ್ ಶಂಕರ್ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಹಂದೆ, ವಾಸು ಪೂಜಾರಿ, ಪ್ರತಿಷ್ಠಾನದ ಟ್ರಸ್ಟಿ ಸುಶೀಲ ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು.