ಕಾರಂತ ಥೀಮ್ ಪಾರ್ಕ್: ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಭೇಟಿ ನೀಡಿದರು.

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಪರ ಜಿಲ್ಲಾಧಿಕಾರಿಗಳು ಥೀಮ್ ಪಾರ್ಕ್‌ಗೆ ಬರುವ ರಸ್ತೆಯ ಸಮಸ್ಯೆ ಹಾಗೂ ನಿರ್ಮಾಣವಾಗಲಿರುವ ಸ್ವಾಗತ ಗೋಪುರದ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೇ ಮುಂದೆ ಥೀಮ್ ಪಾರ್ಕ್‌ನಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು.

ಕಾರಂತರ ಸಮಾಧಿ ಸ್ಥಳಕ್ಕೆ ಭೇಟಿ
ಇದೇ ಸಂದರ್ಭದಲ್ಲಿ ಕಾರಂತರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು, ಕಾರಂತರ ಸಮಾಧೀಗೆ ತೆರಳಲು ರಸ್ತೆ ನಿರ್ಮಾಣ ಹಾಗೂ ಕುಟುಂಬದವರ ಜೊತೆ ಸಂಪರ್ಕಿಸಿ ಕಾರಂತರ ಸಮಾಧಿ ನಿರ್ಮಾಣ ಮಾಡುವ ಬಗ್ಗೆ ಸಚಿವರ ಮಾರ್ಗದರ್ಶನದಲ್ಲಿ ಯೋಜನೆ ರೂಪಿಸಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಆರ್.ಐ ರಾಜು, ಪ್ರತಿಷ್ಠಾನದ ಸುಬ್ರಾಯ ಆಚಾರ್ಯ, ವಿ.ಎ ಚೆಲುವರಾಜ್, ಸಚಿವರ ಆಪ್ತಸಹಾಯಕರು, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

12 − 7 =