ಕಾರಂತ ಹುಟ್ಟೂರ ಪ್ರಶಸ್ತಿ: ತಂಬೆಲರು 2017ರ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯ ಅಂಗವಾಗಿ ಅಕ್ಟೋಬರ್ ೧೦ರಂದು ನಟ, ನಿರ್ಮಾಪಕ, ನಿರ್ದೇಶಕ ಪ್ರಕಾಶ್ ರೈ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ವಿತರಣೆ ಮಾಡಲಿದ್ದೇವೆ. ೧೩ ವರ್ಷದ ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 1ರಿಂದ 10ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಈ ಬಾರಿ ವಿಶೇಷವಾಗಿ ಕಾರಂತರಿಗೆ ಪಂಚನಮನ ಸಲ್ಲಿಸು ವಿಭಿನ್ನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಅಧ್ಯಕ್ಷ ಆನಂದ ಸಿ.ಕುಂದರ್ ಹೇಳಿದರು.

ಅವರು ಕೋಟ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಅಕ್ಟೋಬರ್ ೧ ರಿಂದ ೧೦ರ ವರೆಗೆ ನಡೆಯಲಿರುವ ಕಾರಂತೋತ್ಸವ ತಂಬೆಲರು 2017ರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಕಾರ್ಯಕ್ರಮ ಕಾರ್ಯ ಸ್ವರೂಪಗಳ ಬಗ್ಗೆ ನಡೆದ ಸಭೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಅಕ್ಟೋಬರ್ ೧ರಂದು ಮಕ್ಕಳ ಹಬ್ಬದ ಮೂಲಕ ತಂಬೆಲರು ಕಾರ್ಯಕ್ರಮ ಉದ್ಘಾಟನೆಗೊಳ್ಳಿದ್ದು, ಪ್ರತಿದಿನ ಸಂಜೆ ೫.೩೦ರಿಂದ ಪ್ರಾದೇಶಿಕ ಮತ್ತು ಪ್ರಶಸ್ತಿ ವಿಜೇತ ಚಲನಚಿತ್ರಗಳು ಪ್ರದರ್ಶನ ನಡೆಯಲಿದೆ. ಅಕ್ಟೋಬರ್ ೭ರಂದು ಮಹಾಕವಿ ಸಮ್ಮೇಳನ ನಡೆಯಲಿದ್ದು, ಇದರಲ್ಲಿ ನೂರು ಕವಿಗಳು ಭಾಗವಹಿಸಲಿದ್ದಾರೆ. ಅಕ್ಟೋಬರ್ ೮ರಂದು ಬಿಂದು ನಾಡಿ ಚಿಕಿತ್ಸೆ ಶಿಬಿರ ಮತ್ತು ಮಧ್ಯಾಹ್ನ ಜಿಲ್ಲಾ ಮಟ್ಟದ ಯಕ್ಷ ವೇಷ ಮುದ್ದು ಕೃಷ್ಣ ಸ್ಪರ್ಧೆ ನಡೆಯಲಿದೆ. ಅಕ್ಟೋಬರ್ ೯ರಂದು ಯಕ್ಷ ಗಾನ ನಾಟ್ಯ ವೈಭವ ನಡೆಯಲಿದ್ದು, ಅಕ್ಟೋಬರ್ ೧೦ರಂದು ಮಧ್ಯಾಹ್ನ ೩ ಕ್ಕೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಲ್ಲದೇ ಸಮಾರಂಭಕ್ಕೂ ಮೊದಲು ಕೋಟತಟ್ಟು ಪಂಚಾಯತ್ ಆವರಣದಿಂದ ಕೋಟ ಥೀಂ ಪಾರ್ಕ್‌ವರೆಗೆ ಮೆರವಣಿಗೆ ನಡೆಯಲಿದೆ ಎಂದರು.

ಕೋಟತಟ್ಟು ಪಂಚಾಯತ್ ಅಧ್ಯಕ್ಷ ಎಚ್.ಪ್ರಮೋದ್ ಹಂದೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದು, ಹತ್ತು ದಿನದ ಕಾರ್ಯಕ್ರಮಕ್ಕೆ ಸರ್ವರೂ ಸಹಕರಿಸುವಂತೆ ಕೋರಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಶೆಟ್ಟಿ, ಪ್ರತಿಷ್ಠಾನದ ಸದಸ್ಯ ಸುಶೀಲಾ ಸೋಮಶೇಖರ್, ಪ್ರತಿಷ್ಠಾನದ ಸದಸ್ಯ ಸುಬ್ರಾಯ ಆಚಾರ್ಯ ಮಣೂರು ಉಪಸ್ಥಿತರಿದ್ದರು. ಸಭೆಯಲ್ಲಿ ಕಾರಂತ ಪ್ರತಿಷ್ಠಾನ ಸದಸ್ಯರು, ಕೋಟತಟ್ಟು ಪಂಚಾಯತ್ ಸದಸ್ಯರು ಮತ್ತಿತರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ಶಿಕ್ಷಕ ಸಾಹಿತಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸತೀಶ್ ವಡ್ಡರ್ಸೆ ಹಿಂದಿನ ಸಭೆಯ ನಿರ್ಣಯಗಳನ್ನು ವಾಚಿಸಿದರು.

 

Leave a Reply

Your email address will not be published. Required fields are marked *

12 + 4 =