ಕುಂದಾಪ್ರ ಡಾಟ್ ಕಾಂ ಸುದ್ದಿ
ಕನ್ನುಕರೆ: ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಮೀಪ ರಾ.ಹೆ 66ರಲ್ಲಿ ಕಾರೊಂದು ಡಿವೈಡರ್ ಏರಿ ವಿರುದ್ಧ ದಿಕ್ಕಿಗೆ ಬಂದು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವಿಗೀಡಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ.
ವ್ಯಾಗನರ್ ಕಾರಿನಲ್ಲಿದ್ದ ಕೇರಳ ಮೂಲದ ಶಿಬು (32) ಮೃತಪಟ್ಟವರು. ಅವರ ಜತೆ ಕಾರಿನಲ್ಲಿದ್ದ ರಿಜೇಶ್ ಹಾಗೂ ಪ್ರಮೋದ್ ಅವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಕೇರಳದಿಂದ ಕುಂದಾಪುರದೆಡೆಗೆ ಸಾಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕವನ್ನು ಏರಿ ವಿರುದ್ಧ ದಿಕ್ಕಿಗೆ ಸಾಗಿದ ಪರಿಣಾಮವಾಗಿ ಪುಣೆಯಿಂದ ಮಂಗಳೂರಿನ ಕಡೆಗೆ ಸಾಗುತ್ತಿದ್ದ ಫಾರ್ಚೂನಾರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ವ್ಯಾಗನರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಫಾರ್ಚೂನಾರ್ ಕಾರಿನ ಬಲಭಾಗ ನಜ್ಜುಗುಜ್ಜಾಗಿದೆ. ಫಾರ್ಚೂನಾರ್ ಕಾರಿನಲ್ಲಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ .