ಕುಂದಾಪುರದಲ್ಲಿ ಕಾರ್ಮಿಕ ದಿನಾಚರಣೆ: ಬಂಡವಾಳಶಾಹಿಗಳಿಂದ ಕಾರ್ಮಿಕರ ಶೋಷಣೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸಿಐಟಿಯು ಹಾಗೂ ವಿವಿಧ ಸಂಘಟನೆ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಪುರಮೆರವಣಿಗೆ ಹಾಗೂ ಬಹಿರಂಗ ಸಮಾವೇಶ ಜರುಗಿತು.

Call us

Call us

Click Here

Visit Now

ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ. ಶಂಕರ್ ಮಾತನಾಡಿ ಸಾಮ್ರಾಜ್ಯಶಾಹಿ, ಬಂಡವಾಳಶಾಹಿ ಧೋರಣೆಯಿಂದ ಕಾರ್ಮಿಕರ ಶೋಷಣೆ ಇಂದಿಗೂ ನಿಂತಿಲ್ಲ. ಸಾಮಾಜ್ಯಶಾಹಿ, ಬಂಡವಾಳಶಾಹಿ ನಡುವೆ ಸಿಲುಕಿದ ಕಾರ್ಮಿಕ ಇನ್ನೂ ಕಷ್ಟ ಕೂಲಿ ಪಡೆಯಲಾಗಿಲ್ಲ ಎಂದರೆ ಅದಕ್ಕಿಂತ ದೊಡ್ಡ ದೌರ್ಭಾಗ್ಯ ಮತ್ತೊಂದಿಲ್ಲ. ಇದರೊಟ್ಟಿಗೆ ನೌಕರಶಾಹಿ ಆಡಳಿತ ಕಾರ್ಮಿಕ ವಲಯಕ್ಕೆ ದೊಡ್ಡ ಅಪಾಯ ತರಲಿದೆ ಎಂದ ಅವರು ಕಾರ್ಮಿಕ ಸಂಘಟನೆಗಳು ಕನಿಷ್ಟ ಕೂಲಿ ಸೌಲಭ್ಯಗಳ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಕಾರ್ಮಿಕರ ಸಂಘಟನೆಗಳಲ್ಲಿ ಹೆಚ್ಚು ಹೆಚ್ಚು ಕಾರ್ಮಿಕರು ತೊಗಸಿಕೊಳ್ಳುವ ಮೂಲಕ ಕಾರ್ಮಿಕ ವಲಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು.

Click here

Click Here

Call us

Call us

ಸಿಐಟಿಯು ತಾಲೂಕು ಅಧ್ಯಕ್ಷ ಹೆಚ್.ನರಸಿಂಹ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭೆ ಮಾಜಿ ಅಧ್ಯಕ್ಷ ವಿ.ನರಸಿಂಹ, ಕಟ್ಟಡ ಕಾರ್ಮಿಕ ಸಂಘಟನೆ ಅಧ್ಯಕ್ಷ ಯು.ದಾಸ ಭಂಡಾರಿ, ಬೀಡಿ ಕಾರ್ಮಿಕ ಸಂಘಟನೆ ಅಧ್ಯಕ್ಷ ಮಾಹಾಬಲ ವಡೇರ ಹೋಬಳಿ, ಬೀಡಿ ಕಾರ್ಮಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಲ್ಕೀಸ್ ಭಾನು, ಅಂಗನವಾಡಿ ಕಾರ್ಯಕರ್ತರ ಸಂಘದ ಅಧ್ಯಕ್ಷೆ ರತಿ ಶೆಟ್ಟಿ, ಆಟೋರಿಕ್ಷ ಯೂನಿಯನ್ ಅಧ್ಯಕ್ಷ ಲಕ್ಷ್ಮಣ ಬರೇಕಟ್ಟೆ, ಡಿವೈಎಫ್ವೈ ಮುಖಂಡ ರಾಜೇಶ್ ಮಠದಬೆಟ್ಟು, ಅಕ್ಷರದಾಸೋಹ ಸಂಘಟನೆ ಅಧ್ಯಕ್ಷೆ ನಾಗರತ್ನಾ, ಕೃಷಿ ಕೂಲಿ ಕಾರ್ಮಿಕ ಸಂಘ ಪ್ರಧಾನ ಕಾರ್ಯದರ್ಶಿ ನಾಗರತ್ನಾ, ಮಹಿಳಾ ಸಂಘಟನೆ ಮುಖ್ಯಸ್ಥೆ ಶೀಲಾವತಿ ಇದ್ದರು.

ಕಟ್ಟಡ ಕಾರ್ಮಿಕ ಸಂಘ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಸ್ವಾಗತಿಸಿದರು. ಗುಲ್ವಾಡಿ ಕಾರ್ಮಿಕ ಸಂಘಟನೆ ಮುಖ್ಯಸ್ಥ ರಮೇಶ್ ಗುಲ್ವಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

19 + seventeen =